ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ಮಾಡುವಾಗ ನೀವು ಮಾಡಬೇಕಾದ, ಮಾಡಬಾರದ ಸಂಗತಿಗಳಿವು.

ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ಮಾಡುವಾಗ ನೀವು ಮಾಡಬೇಕಾದ, ಮಾಡಬಾರದ ಸಂಗತಿಗಳಿವು.

ಭಾರತದಲ್ಲಿ ಪ್ರತಿವರ್ಷ ಆಗಸ್ಟ್‌ 15 ರಂದು ಬಹಳ ವಿಜೃಂಭನೆಯಿಂದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಸರ್ಕಾರಿ ಹಾಗೂ ಸರ್ಕಾರೇತರ ಕಚೇರಿ, ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಲಾಗುತ್ತದೆ. ರಾಷ್ಟ್ರ ಧ್ವಜವನ್ನು ಹಾರಿಸಲು ಅದರದ್ದೇ ಆದ ನಿಯಮಗಳಿದ್ದು, ಧ್ವಜಾರೋಹರಣ ಮಾಡುವಾಗ ಏನು ಮಾಡಬೇಕು, ಏನು ಮಾಡಬಾರದು ಎಂಬುದನ್ನು ತಪ್ಪದೆ ತಿಳಿದುಕೊಳ್ಳಿ.

1947 ಆಗಸ್ಟ್‌ 15 ರಂದು ಭಾರತವು ಬ್ರಿಟೀಷರ ದಾಸ್ಯದಿಂದ ಮುಕ್ತವಾಗಿ ಸ್ವಾತಂತ್ರ್ಯ ಗಳಿಸಿದ ದಿನ. ಈ ಸ್ವಾತಂತ್ರ್ಯ ದಿನವನ್ನು ಪ್ರತಿವರ್ಷ ದೇಶಾದ್ಯಂತ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಧ್ವಜಾರೋಹಣ ಮಾಡಿ, ದೇಶಕ್ಕಾಗಿ ತ್ಯಾಗ, ಬಲಿದಾನವನ್ನು ಮಾಡಿದಂತಹ ವೀರ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಲಾಗುತ್ತದೆ. ಈ ದಿನ ಸರ್ಕಾರಿ, ಸರ್ಕಾರೇತರ ಸಂಸ್ಥೆಗಳು, ಕಚೇರಿಗಳು, ಶಾಲಾ ಕಾಲೇಜುಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಇದಲ್ಲದೆ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಬಳಿಕ ಮನೆ ಮನೆಗಳಲ್ಲೂ ರಾಷ್ಟ್ರ ಧ್ವಜ ಹಾರಿಸಲಾಗುತ್ತಿದೆ. ವಾಸ್ತವವಾಗಿ ರಾಷ್ಟ್ರ ಧ್ವಜವನ್ನು ಹಾರಿಸಲು ಮತ್ತು ಇಳಿಸಲು ಅದರದ್ದೇ ಆದ ಹಲವಾರು ನಿಯಮಗಳಿದ್ದು,  ನಾಳೆ ಅಂದರೆ ಸ್ವಾತಂತ್ರ್ಯ ದಿನದಂದು ರಾಷ್ಟ್ರ ಧ್ವಜವನ್ನು ಹಾರಿಸುವ ಯೋಜನೆಯಲ್ಲಿದ್ದರೆ, ಧ್ವಜಾರೋಹಣ ಮಾಡುವಾಗ ಏನು ಮಾಡಬೇಕು, ಏನು ಮಾಡಬಾರದು ಎಂಬುದನ್ನು ತಪ್ಪದೆ ತಿಳಿದುಕೊಳ್ಳಿ.

ತ್ರಿವರ್ಣ ಧ್ವಜ ಹಾರಿಸುವಾಗ ಏನು ಮಾಡಬೇಕು, ಏನು ಮಾಡಬಾರದು ಗೊತ್ತಾ?

ಭಾರತದ ಧ್ವಜ ಸಂಹಿತೆ 2002 ರ ಪ್ರಕಾರ ರಾಷ್ಟ್ರ ಧ್ವಜವನ್ನು ಹಾರಿಸಲು ಅದರದ್ದೇ ಆದ ನಿಯಮಗಳಿವೆ. ಆ ನಿಯಮಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ.

  • ಧ್ವಜವನ್ನು ಯಾವಾಗಲೂ ಗೌರವಯುತವಾಗಿ ಹಾರಿಸಬೇಕು ಮತ್ತು ಘನತೆಯಿಂದ ನಿಧಾನವಾಗಿ ಕೆಳಗಿಳಿಸಬೇಕು. ಕೆಳಗಿಳಿಸಿದ ಬಳಿಕ ಅದನ್ನು ಮಡಚಿ ಸುರಕ್ಷಿತ ಸ್ಥಳದಲ್ಲಿಡಬೇಕು.
  •  ತ್ರಿವರ್ಣ ಧ್ವಜವನ್ನು ಎಂದಿಗೂ ತಲೆ ಕೆಳಗಾಗಿ ಪ್ರದರ್ಶಿಸಬಾರದು. ಮೇಲಿನ ಫಲಕದ ಬಣ್ಣವು ಕೇಸರಿ, ಮಧ್ಯ ಬಿಳಿ ಮತ್ತು ಕೆಳಗಿನ ಫಲಕವು ಹಸಿರು ಬಣ್ಣದ್ದಾಗಿರಬೇಕು.
  • ಪ್ರದರ್ಶನದಲ್ಲಿರುವ ತ್ರಿವರ್ಣ ಧ್ವಜವು ಗೌರವದ ಸ್ಥಾನದಲ್ಲಿರುವಂತೆ ನೋಡಿಕೊಳ್ಳಿ.
  • ಹಾನಿಗೊಳಗಾದ ಅಥವಾ ಸ್ವಚ್ಛವಾಗಿರದ ಧ್ವಜವನ್ನು ಎಂದಿಗೂ ಪ್ರದರ್ಶಿಸಬಾರದು. ನೀವು ಹಾರಿಸುವ ರಾಷ್ಟ್ರ ಧ್ವಜ ಪರಿಪೂರ್ಣ ಸ್ಥಿತಿಯಲ್ಲಿ ಇರಬೇಕು.
  • ಧ್ವಜ ಸಂಹಿತೆಯ ಪ್ರಕಾರ, ಕೈಯಿಂದ ನೇಯ್ದ, ಯಂತ್ರದಿಂದ ತಯಾರಿಸಿದ ಹತ್ತಿ, ಪಾಲಿಯೆಸ್ಟರ್, ಉಣ್ಣೆ ಅಥವಾ ರೇಷ್ಮೆ ಖಾದಿ ಬಂಟಿಂಗ್‌ನಿಂದ ತಯಾರಿಸಿದ ರಾಷ್ಟ್ರ ಧ್ವಜಗಳನ್ನು ಹಾರಿಸಬಹುದು.
  • 2002 ರ ತಿದ್ದುಪಡಿ ಮಾಡಿದ ಧ್ವಜ ಸಂಹಿತೆಯ ಪ್ರಕಾರ, ಭಾನುವಾರ ಮತ್ತು ರಜಾದಿನಗಳು ಸೇರಿದಂತೆ ಎಲ್ಲಾ ದಿನಗಳಲ್ಲಿ ವ್ಯಕ್ತಿಗಳು, ಖಾಸಗಿ ಸಂಸ್ಥೆಗಳು ಮತ್ತು ಶಿಕ್ಷಣ ಸಂಸ್ಥೆಗಳು ಧ್ವಜವನ್ನು ಹಾರಿಸಬಹುದು.
  • ಧ್ವಜದ ಗಾತ್ರ ಏನೇ ಇರಲಿ ಧ್ವಜ ಸಂಹಿತೆಯ ಪ್ರಕಾರ ತ್ರಿವರ್ಣ ಧ್ವಜ 3:2 ಅನುಪಾತದಲ್ಲಿರಬೇಕು. ಮತ್ತು ಧ್ವಜದ ಮಧ್ಯ ಭಾಗವು 24 ಸಮಾನ ಅಂತರದ ಗೆರೆಗಳೊಂದಿಗೆ ಕಡು ನೀಲಿ ಬಣ್ಣದಲ್ಲಿನ ಅಶೋಕ ಚಕ್ರವನ್ನು ಹೊಂದಿರಬೇಕು.
  • ಮನೆಯಲ್ಲಾಗಲಿ ಅಥವಾ ಕಚೇರಿಯಲ್ಲಾಗಿರಲಿ ತ್ರಿವರ್ಣ ಧ್ವಜವನ್ನು ಹಾರಿಸುತ್ತಿದ್ದರೆ, ಧ್ವಜ ವಾಲದಂತೆ ಮತ್ತು ನೆಲ ಅಥವಾ ನೀರನ್ನು ಮುಟ್ಟದಂತೆ ನೋಡಿಕೊಳ್ಳಿ.
  • ಒಂದು ವೇಳೆ ತ್ರಿವರ್ಣ ಧ್ವಜ ಹಾನಿಗೊಳಗಾದರೆ ಅದನ್ನು ಕಸದ ಬುಟ್ಟಿ ಅಥವಾ ಇನ್ನಾವುದೇ ಸ್ಥಳದಲ್ಲಿ ಎಸೆಯಬಾರದು ಬದಲಿಗೆ ಗೌರವಯುತವಾಗಿ ಸುಡಬೇಕು ಅಥವಾ ಹೂಳಬೇಕು. ಸುಟ್ಟ ನಂತರ ಆ ಬೂದಿಯನ್ನು ನದಿ ನೀರಿನಲ್ಲಿ ಬಿಡಬೇಕು.
  • ಧ್ವಜವನ್ನು ಸಾರ್ವಜನಿಕವಾಗಿ ಉದ್ದೇಶಪೂರ್ವಕವಾಗಿ ಹರಿದು ಹಾಕಬಾರದು, ಸುಡಬಾರದು ಅಥವಾ ವಿರೂಪಗೊಳಿಸಬಾರದು, ಏಕೆಂದರೆ ಇದು ಅಪರಾಧವಾಗಿದೆ.
  • ಧ್ವಜವನ್ನು ಕೊಳಕು ಜಾಗದಲ್ಲಿ ಅಥವಾ ಹಾನಿ ಮಾಡುವ ರೀತಿಯಲ್ಲಿ ಸಂಗ್ರಹಿಸಬಾರದು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *