ಸಿದ್ದರಾಮಯ್ಯಗೆ ಹೈಕಮಾಂಡ್ ಗ್ರೀನ್ ಸಿಗ್ನಲ್.

ಸಿದ್ದರಾಮಯ್ಯಗೆ ಹೈಕಮಾಂಡ್ ಗ್ರೀನ್ ಸಿಗ್ನಲ್.

ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ.

ಮೈಸೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷಗಳ ಪೂರ್ಣಾವಧಿ ಮುಂದುವರಿಯಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದ್ದು, ರಾಜಕೀಯ ವಲಯದಲ್ಲಿ ಈ ಬಗ್ಗೆ ಗೊಂದಲವಿಲ್ಲ. ಹೈಕಮಾಂಡ್ ಕಡೆಯಿಂದ ಸ್ಪಷ್ಟ ಸೂಚನೆ ಲಭಿಸಿದ್ದು, ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದರು.

ಯಾರೋ ಕೆಲವರು ನಾಯಕತ್ವ ಬದಲಾವಣೆಗೆ ಪ್ರಯತ್ನಿಸಿದ್ದರು. ಆದರೆ, ಆ ಪ್ರಯತ್ನಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ. ಹೀಗಾಗಿ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿ ಅಧಿಕಾರ ಮುನ್ನಡೆಸಲಿದ್ದಾರೆ ಎಂದು ಯತೀಂದ್ರ ಹೇಳಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *