ಹಾವೇರಿ: ಬೆಂಗಳೂರು ಏರ್ಪೋರ್ಟ್ನಲ್ಲಿ ನಮಾಜ್ ಮಾಡಿರುವುದನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಾಜಿ ಸಚಿವ ಹೆಚ್. ಆಂಜನೇಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಮರು ಮಾಡಿದ್ದು ಪ್ರಾರ್ಥನೆ, ಕೋಲು ಹಿಡಿದುಕೊಂಡು ಹೋಗೊದಲ್ಲ. ಅವರಲ್ಲಿರೋ ಶ್ರದ್ಧೆಯನ್ನ ನೋಡಿ ನೀವೆಲ್ಲರೂ ಕಲಿತುಕೊಳ್ಳಿ.
ಇವರಂಗೆ ನಾಮ ಹಾಕಿಕೊಂಡು, ಪೂಜೆ ಮಾಡಿ ತಟ್ಟೆಗೆ ಹಾಕಯ್ಯ ಅಂತ ಕೇಳಿಲ್ಲ. ಅವರು ಮೂರ್ಖರಲ್ಲ, ಮಸೀದಿ ಇಲ್ಲ ಅಂತೇಳಿ ಅಲ್ಲಿ ನಮಾಜ್ ಮಾಡಿರಬಹುದು. ಅದರಲ್ಲೂ ನಾವು ಸಣ್ಣತನ ತೋರಿಸಿದ್ರೆ ಹೇಗೆ? ಗಣೇಶನ ಹಬ್ಬದಲ್ಲಿ ಬ್ರ್ಯಾಂಡಿ ಅಂಗಡಿಗಳು ಫುಲ್ ರಶ್ ಇರುತ್ತವೆ. ಗಣೇಶ ಹಬ್ಬದಲ್ಲಿ ಹೂ, ಹಣ್ಣಿನ ವ್ಯಾಪಾರ ಆಗಲ್ಲ. ಬದಲಾಗಿ ಹೈಕ್ಲಾಸ್ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳು ಹೌಸ್ಫುಲ್ ಆಗುತ್ತವೆ ಎಂದು ಆಂಜನೇಯ ಹೇಳಿದ್ದಾರೆ.
For More Updates Join our WhatsApp Group :
