ಬಿಹಾರದ ರಾಜ್‌ಗಿರ್‌ನಲ್ಲಿ ನಡೆಯುತ್ತಿರುವ ಹಾಕಿ ಏಷ್ಯಾಕಪ್‌ನಲ್ಲಿ ಭಾರತ ಹಾಕಿ ತಂಡದ ಗೆಲುವಿನ ಓಟ ಮುಂದುವರೆದಿದೆ. ಸತತ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಹರ್ಮನ್ಪ್ರೀತ್ ಸಿಂಗ್ ಪಡೆ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಮೊದಲ ಪಂದ್ಯದಲ್ಲಿ ಚೀನಾ ತಂಡವನ್ನು ಮಣಿಸಿದ್ದ ಭಾರತ ತಂಡ ಎರಡನೇ ಪಂದ್ಯದಲ್ಲಿ ಜಪಾನ್ ತಂಡವನ್ನು ಸೋಲಿಸಿತ್ತು.
ಇದೀಗ ಲೀಗ್ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಕಝಾಕಿಸ್ತಾನ್ ತಂಡವನ್ನು ಏಕಪಕ್ಷೀಯ ಸೋಲಿಸಿತು. ಕುತೂಹಲಕಾರಿ ವಿಷಯವೆಂದರೆ ಈ ಪಂದ್ಯದಲ್ಲಿ ಕಝಾಕಿಸ್ತಾನ್ ತಂಡಕ್ಕೆ ಒಂದೇ ಒಂದು ಗೋಲು ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಭಾರತ ತಂಡ ಮಾತ್ರ ಒಂದರ ಹಿಂದೆ ಒಂದರಂತೆ 15 ಗೋಲುಗಳನ್ನು ಬಾರಿಸಿ ಸೂಪರ್ 4 ರಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.
ಈ ಬಾರಿ ಭಾರತ ತಂಡ ಹಾಕಿ ಏಷ್ಯಾಕಪ್‌ನ ಮೊದಲ ಪಂದ್ಯದಲ್ಲಿ ಚೀನಾವನ್ನು ಸೋಲಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿತು. ಈ ಪಂದ್ಯದಲ್ಲಿ ಭಾರತ, ಚೀನಾವನ್ನು 4-3 ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾಯಿತು. ಇದರ ನಂತರ, ಭಾರತ ಎರಡನೇ ಪಂದ್ಯದಲ್ಲಿ ಜಪಾನ್ ತಂಡವನ್ನು 3-2 ಅಂತರದಿಂದ ಗೆದ್ದುಕೊಂಡಿತು. ಇದೀಗ ಕಝಾಕಿಸ್ತಾನ್ ತಂಡದ ವಿರುದ್ಧ 15-0 ಅಂತರದಿಂದ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಇತ್ತ ಕಝಾಕಿಸ್ತಾನ್ ತಂಡಕ್ಕೆ ಗೋಲು ಗಳಿಸಲು ಕೆಲವು ಅವಕಾಶಗಳನ್ನು ಸಿಕ್ಕರೂ, ಅದರಲ್ಲಿ ಯಶಸ್ವಿಯಾಗಲಿಲ್ಲ.




