ಕಿವಿ ಹಿಡಿದು ಕ್ಷಮೆಯಾಚಿಸಿ, ಇಲ್ಲದಿದ್ದರೆ : ಕೈ ನಾಯಕಿ ಸುಪ್ರಿಯಾ ಹೇಳಿದ್ಯಾರಿಗೆ..?

ನವದೆಹಲಿ: ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಸಭೆಯಲ್ಲಿ ಗಾಂಧಿ ಕುಟುಂಬದ ಬಗ್ಗೆ ನೀಡಿದ್ದ ಹೇಳಿಕೆ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮುಖೇಶ್ ಅಂಬಾನಿ ಪುತ್ರನ ಮದುವೆಗೆ ಹಾಜರಾಗಿರಲಿಲ್ಲ.

ಅಲ್ಲದೇ ಆ ಸಮಯದಲ್ಲಿ ಅವರು ಭಾರತದಲ್ಲಿ ಇರಲಿಲ್ಲ ಎಂದು ಹೇಳುವ ಮೂಲಕ ನಿಶಿಕಾಂತ್ ದುಬೆ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ತಳ್ಳಿಹಾಕಿದ್ದಾರೆ.

ಲೋಕಸಭೆಯಲ್ಲಿ ಹಣಕಾಸು ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ, ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಅವರ ಇತ್ತೀಚಿನ ವಿವಾಹದಲ್ಲಿ ಗಾಂಧಿ ಕುಟುಂಬದ ಸದಸ್ಯರೊಬ್ಬರು ಭಾಗವಹಿಸಿದ್ದರು ಎಂದು ನಿಶಿಕಾಂತ್ ದುಬೆ ಹೇಳಿದ್ದರು. ಈ ವಿಚಾರವಾಗಿ ಹಲವು ನಾಯಕರು ಬಿಜೆಪಿ ಸಂಸದರನ್ನು ಟೀಕಿಸಿದರೆ, ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಮದುವೆಗೆ ಹಾಜರಾಗುವುದರಲ್ಲಿ ತಪ್ಪೇನಿಲ್ಲ ಎಂದು ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೆಟ್ ಎಕ್ಸ್ ಪೋಸ್ಟ್ನಲ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಂಬಾನಿ ಮದುವೆಯಲ್ಲಿ ಭಾಗವಹಿಸಿದ್ದಾರೆ ಎಂದು ನಿಶಿಕಾಂತ್ ದುಬೆ ಲೋಕಸಭೆಯಲ್ಲಿ ಸ್ಪಷ್ಟವಾಗಿ ಸುಳ್ಳು ಹೇಳಿದ್ದಾರೆ. ನಕಲಿ ಪದವಿ ಹೊಂದಿರುವ ಸಂಸದರಿಗೆ ಸುಳ್ಳು ಹೇಳುವ ಕೊಳೆ ರೋಗವಿದೆ. ಈ ಸಂಬಂಧ ಕಿವಿ ಹಿಡಿದು ಕ್ಷಮೆಯಾಚಿಸಿ, ಇಲ್ಲದಿದ್ದರೆ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅದ್ದೂರಿ ಮದುವೆಗೆ ಬಂದಿರಲಿಲ್ಲ. ಆದಾಗ್ಯೂ, ಪ್ರಧಾನಿ ನರೇಂದ್ರ ಮೋದಿ ಮತ್ತು ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಸೇರಿದಂತೆ ಪ್ರತಿಪಕ್ಷ ಮತ್ತು ಆಡಳಿತ ಪಕ್ಷದ ಅನೇಕ ನಾಯಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *