ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಸ್ಥಳದಲ್ಲಿ ದರ್ಶನ್ ಹಾಜರಾತಿ ದೃಢಪಟ್ಟ ಹಿನ್ನೆಲೆಯಲ್ಲಿ ಜಾಮೀನು ರದ್ದು ಮಾಡುವ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಎಫ್ಎಸ್ಎಲ್ ವರದಿ ಮತ್ತು ಸಾಬೀತುಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಯೋಜನೆ.
ಬೆಂಗಳೂರಿನಲ್ಲಿ ಮಾತಾಡಿದ ಅವರು, ದರ್ಶನ್ ಜತೆಗಿದ್ದ ಇತರೆ ಆರೋಪಿಗಳ ಮೊಬೈಲ್ ಫೋನ್ ಗಳನ್ನು ಎಫ್ ಎಸ್ ಎಲ್ ವರದಿಗಾಗಿ ಹೈದರಾಬಾದ್ ಗೆ ಕಳುಹಿಸಲಾಗಿತ್ತು. ಕೊಲೆ ನಡೆದ ಸ್ಥಳದಲ್ಲಿ ದರ್ಶನ್ ಇರುವ ಫೋಟೋಗಳು ಲಭ್ಯವಾಗಿದೆ. ಮೇಲ್ನೋಟಕ್ಕೆ ದರ್ಶನ್ ಪಾತ್ರ ದೊಡ್ಡದಾಗಿ ಕಾಣುತ್ತಿದೆ. ಹೀಗಾಗಿ ದರ್ಶನ್ ಜಾಮೀನು ರದ್ದು ಮಾಡುವಂತೆ ಕೋರ್ಟ್ ಗೆ ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.
ಯಾರೋ ಜೊತೆಯಲ್ಲಿದ್ದವನು ವಿಡಿಯೊ ಮಾಡಿಕೊಂಡಿದ್ದ. ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಜಾಮೀನು ರದ್ದುಪಡಿಸಬೇಕು, ಮುಂದಿನ ಕ್ರಮದ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.
ದರ್ಶನ್ ಬೆನ್ನು ಆಪರೇಶನ್ ಮಾಡಿಸಿಲ್ಲ. ಹಾಗೆಯೇ ಕಾಲ ಕಳೆಯುತ್ತಿದ್ದಾರೆ. ದರ್ಶನ್ ಗೆ ಆಪರೇಷನ್ ಅಗತ್ಯ ಇಲ್ಲ ಎಂದು ಇದರಿಂದ ಗೊತ್ತಾಗುತ್ತದೆ. ಆಪರೇಷನ್ ಮಾಡದಿದ್ದರೆ ಬೆನ್ನುಮೂಳೆ ಮುರಿದು ಹೋಗುತ್ತದೆ ಎಂದು ಹೇಳುತ್ತಿದ್ದರು. ಇಷ್ಟು ದಿನವಾದರೂ ವೈದ್ಯರು ಆಪರೇಷನ್ ಮಾಡಿಲ್ಲ, ಕೋರ್ಟ್ ಈ ಬಗ್ಗೆ ಗಮನ ಹರಿಸಿ ಸೂಕ್ತ ಆದೇಶ ನೀಡಬೇಕು ಎಂದರು.