ಬೆಂಗಳೂರು: ಬೈಕ್ ನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಯುವಕನೋರ್ವ ಸಾವನ್ನಪ್ಪಿದ್ದು, ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ರಸ್ತೆಯ ಬಿಜಿಎಸ್ ಮೇಲ್ಸೇತುವೆ ಡೌನ್ ರಾಂಪ್ ನಲ್ಲಿ ಭಾನುವಾರ ನಡೆದಿದೆ.
ಮೃತರನ್ನು ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಾಲ್ಮೀಕಿನಗರ ನಿವಾಸಿ ವಿಘ್ನೇಶ್ (26) ಎಂದು ಗುರುತಿಸಲಾಗಿದೆ. ಗಾಯಗೊಂಡಾತನನ್ವು ಕೆಂಗೇರಿ ನಿವಾಸಿ ಶ್ರೀ ನಿಧಿ (25) ಎಂದು ಗುರುತಿಸಲಾಗಿದೆ.
ಬೆಳಗಿನ ಜಾವ 1.30 ರ ಸುಮಾರಿಗೆ ವಿಘ್ನೇಶ್ ಮತ್ತು ಶ್ರೀ ನಿಧಿ ರೆಸ್ಟೋರೆಂಟ್‌ನಲ್ಲಿ ಊಟ ಮುಗಿಸಿ. ಮನೆಗೆ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.
ವಿಘ್ನೇಶ್ ಅತಿ ವೇಗದಿಂದ ಚಾಲನೆ ಮಾಡಿದ್ದು, ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ನಿಂದ ಇಬ್ಬರೂ ರಸ್ತೆಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಇಬ್ಬರನ್ನೂ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.