ಬೆಂಗಳೂರಿನ ಹೋಟೆಲ್‌ನಲ್ಲಿ ಭೀಕರ ಅ* ಅವಘಡ : ಓರ್ವ ಸಾ*.!

ಬೆಂಗಳೂರಿನ ಹೋಟೆಲ್‌ನಲ್ಲಿ ಭೀಕರ ಅ* ಅವಘಡ : ಓರ್ವ ಸಾ*.!

ನಾಗರಬಾವಿ ಖಾಸಗಿ ಹೋಟೆಲ್‌ಗೆ ಬೆ*ಕಿ: ದಟ್ಟ ಹೊಗೆಯಿಂದ ಸಿಬ್ಬಂದಿ ಅಸ್ವಸ್ಥ, ಒಬ್ಬರ ದುರ್ಮರಣ

ಬೆಂಗಳೂರು: ಬೆಂಗಳೂರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹೋಟೆಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸಾವನ್ನಪ್ಪಿದ ಘಟನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ನಾಗರಬಾವಿಯ ಹೋಟೆಲ್‌ವೊಂದರಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಸಲಾಗುತ್ತಿದೆ. ನಾಗರಬಾವಿಯ ಹೊರವರ್ತುಲ ರಸ್ತೆಯ ಪಕ್ಕದ ಸರ್ವಿಸ್‌ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ತಡರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಅಲ್ಲೇ ಕೆಲಸ ಮಾಡುತ್ತಿದ್ದ 8 ಮಂದಿ ಹೋಟೆಲ್‌ ಸಿಬ್ಬಂದಿ ವಾಸವಿದ್ದ ಹೋಟೆಲ್‌ ಕಟ್ಟಡದ ಮೇಲಿನ ಮಹಡಿಗೂ ಬೆಂಕಿ ವ್ಯಾಪಿಸಿದೆ.

ದಟ್ಟ ಹೊಗೆಯಿಂದಾಗಿ ಸಿಬ್ಬಂದಿ ಭೀಮಾ, ಶಿವಾನಂದ್, ಸತೀಶ್‌, ರಾಜಕುಮಾರ್‌ ಸೇರಿದಂತೆ ಐವರು ಅಸ್ವಸ್ಥಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ದುರದೃಷ್ಟವಶಾತ್ 45 ವರ್ಷದ ರಾಜಕುಮಾರ್ ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಳಿದ ನಾಲ್ವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು‌ ಪೊಲೀಸರು ತಿಳಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *