ಬೆಂಗಳೂರು : ಬೆಂಗಳೂರಲ್ಲಿ ಭೀಕರ ಸಂಭವಿಸಿದ್ದು, ಟಿಪ್ಪರ್ ಲಾರಿ ಹರಿದು ಪೌರ ಕಾರ್ಮಿಕೆ ಸಾವನ್ನಪ್ಪಿರುವ ಘಟನೆ ವಿಜಯನಗರ ಸಂಚಾರ ಠಾಣಾ ವ್ಯಾಪ್ತಿಯ ಶಿವನಗರ ಫ್ಲೈಓವರ್ ಬಳಿ ನಡೆದಿದೆ. ಸರೋಜ ಮೃತ ಬಿಬಿಎಂಪಿ ಪೌರ ಕಾರ್ಮಿಕೆ.

ಅಪಘಾತವೆಸಗಿ ಟಿಪ್ಪರ್ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಸದ್ಯ ಮೃತ ಸರೋಜ ಮೃತದೇಹ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸರೋಜ ಅವರು ಬಯೋಮೆಟ್ರಿಕ್ ಹಾಜರಾತಿ ನೀಡಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಸರೋಜಾ ಮೇಲೆ ಟಿಪ್ಪರ್ ಹಿಂಬದಿ ಟಯರ್ ಹರಿದಿದ್ದು, ಅಪಘಾತದ ರಭಸಕ್ಕೆ ಸ್ಥಳದಲ್ಲೇ ಪೌರ ಕಾರ್ಮಿಕೆ ಸರೋಜಾ ಅವರು ಸಾವನ್ನಪ್ಪಿದ್ದಾರೆ. ಘಟನಾ ಸಂಬಂಧ ವಿಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ