ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಡಿವೈಡರ್ʼಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಸಾ*!

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಡಿವೈಡರ್ʼಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಸಾ*!

ದೇವನಹಳ್ಳಿ ಬಳಿ ದುರ್ಘಟನೆ: ಬೈಕ್ ಅಪಘಾತದಲ್ಲಿ ಮಹಿಳೆ ಮೃತ್ಯು, ಸೈಕಲ್ ಸವಾರನ ಕಾಲು ಮುರಿತ.

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಭುವನಹಳ್ಳಿ ಗೇಟ್ ಸಮೀಪ ಈ ದುರ್ಘಟನೆ ನಡೆದಿದೆ.ದೇವನಹಳ್ಳಿ ಕಡೆಯಿಂದ ಯಲಹಂಕದತ್ತ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸವಾರ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ.ಅಪಘಾತದ ತೀವ್ರತೆಗೆ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಮಹಿಳೆಯನ್ನು ಬೆಂಗಳೂರಿನ ಪೀಣ್ಯ ಮೂಲದ 24 ವರ್ಷದ ಚಂದನ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಬೈಕ್ ರಸ್ತೆಗೆ ಬಿದ್ದಿದ್ದು, ಮುಂದೆ ಸಂಚರಿಸುತ್ತಿದ್ದ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸೈಕಲ್ ಸವಾರರ ಕಾಲು ಮುರಿದಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ.

ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ದೇವನಹಳ್ಳಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *