ಬೆOಗಳೂರು : ಬೆಂಗಳೂರಿನ ಅಶೋಕ್ ನಗರದಲ್ಲಿರುವ ಸೈನಿಕ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಶಾಲೆಗೆ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಸಂದೇಶ ರವಾನಿಸಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದ್ದು, ಈ ಕುರಿತು ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಗರದ ಆರ್ಮಿ ಸ್ಕೂಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬಾಂಬ್ ಇಟ್ಟು ಬ್ಲಾಸ್ಟ್ ಮಾಡುವುದಾಗಿ ಇಮೇಲ್ನಲ್ಲಿ ಬರೆಯಲಾಗಿದೆ. ಶಾಲೆಯ ಇ ಮೇಲ್ ಖಾತೆಗೆ ಬೆದರಿಕೆ ಮೇಲ್ ಬಂದಿದ್ದು, ಇದನ್ನು ನೋಡಿದ ಸಿಬ್ಬಂದಿ ಕೂಡಲೇ ಕ ಆಶೋಕ ನಗರ ಪೊಲೀಸ್ ಠಾಣೆ ಗೆ ಮಾಹಿತಿ ನೀಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ ಸಮೇತ ಶಾಲೆಗೆ ತೆರಳಿ ಪರಿಶೀಲನೆ ಮಾಡಿದ್ದಾರೆ. ಯಾವ ಬಾಂಬ್ ಪತ್ತೆಯಾಗಿಲ್ಲ. ಹುಸಿ ಬೆದರಿಕೆ ಇ- ಮೇಲ್ ಎಂಬುದು ಬೆಳಕಿಗೆ ಬಂದಿದೆ. ಇ- ಮೇಲ್ ಬೆದರಿಕೆ ಸಂಬAಧಿಸಿದAತೆ ಆಶೋಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಇದೇನು ಮೊದಲಲ್ಲ. ಈ ಹಿಂದೆ ನಗರದ ಹಲವು ಶಾಲೆಗಳಿಗೆ ಬಾಂಬ್ ಇಟ್ಟಿರುವ ಬೆದರಿಕೆ ಇ – ಮೇಲ್ಗಳು ಬಂದಿರುವ ಪ್ರಕರಣ ಇವೆ. ಕೆಲವು ಬಾರಿ ಶಾಲೆಗಳು, ಹೋಟೆಲ್ಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಗಳು ಬರುತ್ತಿದ್ದು, ಪೊಲೀಸರು ಹೆಚ್ಚು ಅಲರ್ಟ್ ಆಗಿದ್ದಾರೆ.