ಇತ್ತೀಚೆಗಿನ ದಿನಗಳಲ್ಲಿ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೌದು, ಆಧುನಿಕ ಜೀವನಶೈಲಿಯಿಂದಾಗಿ ಮಕ್ಕಳಿಂದ ಹಿಡಿದು ವಯೋವೃದ್ಧರನ್ನು ಈ ಮಧುಮೇಹವು ಕಾಡುತ್ತಿದೆ. ಈ ಆರೋಗ್ಯ ಸಮಸ್ಯೆಯಿರುವವರು ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ಶುಗರ್ ಲೆವೆಲ್ ಕಂಟ್ರೋಲ್ ಮಾಡಲು ಆರೋಗ್ಯಕರ ಜೀವನಶೈಲಿ ಹಾಗೂ ಆಹಾರ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಶುಗರ್ ಲೆವೆಲ್ ಕಂಟ್ರೋಲ್‌ಗೆ ಮೆಂತ್ಯ ಬೀಜದ ನೀರು ಸೇವನೆ ಮಾಡುವುದು ಪರಿಣಾಮಕಾರಿಯಾಗಿದೆ.
ಮಧುಮೇಹ ಸಮಸ್ಯೆಗೆ ಮೆಂತ್ಯ ನೀರು ಹೇಗೆ ಸಹಕಾರಿ?
ಪ್ರತಿಯೊಬ್ಬರ ಅಡುಗೆಮನೆಯಲ್ಲಿ ಇರುವ ಮೆಂತ್ಯವು ಮಧುಮೇಹವನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ಪ್ರತಿದಿನ ರಾತ್ರಿ ಒಂದು ಲೋಟ ನೀರಿಗೆ ಒಂದು ಚಮಚ ಮೆಂತ್ಯ ಹಾಕಿ ನೆನೆಸಿಟ್ಟು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
ಮೆಂತ್ಯ ನೀರು ಸೇವನೆಯೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಮೆಂತ್ಯ ಬೀಜಗಳು ಮಧುಮೇಹ ವಿರೋಧಿ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದ್ದು ಇನ್ಸುಲಿನ್ ಪ್ರತಿರೋಧವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಮೆಂತ್ಯದಲ್ಲಿರುವ ಫೈಬರ್ ಹಾಗೂ ರಾಸಾಯನಿಕಗಳು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತವೆ. ದೇಹವು ಕಾರ್ಬೋಹೈಡ್ರೇಟ್‌ಗಳು ಹಾಗೂ ಸಕ್ಕರೆಯನ್ನು ಹೀರಿಕೊಳ್ಳುವ ವೇಗವನ್ನು ಕಡಿಮೆಗೊಳಿಸಿ, ಇನ್ಸುಲಿನ್ ಪ್ರಮಾಣವನ್ನು ಹೆಚ್ಚಿಸುತ್ತದೆ. ಈ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ.
For More Updates Join our WhatsApp Group :