ಹುಬ್ಬಳ್ಳಿ || ಟರ್ಮಿನಲ್ ನಿರ್ಮಾಣ ಮೊದಲೇ ಏರ್ಪೋರ್ಟ್ ಖಾಸಗಿ ಕಂಪನಿ ಸುಪರ್ದಿಗೆ

ಹುಬ್ಬಳ್ಳಿ || ಟರ್ಮಿನಲ್ ನಿರ್ಮಾಣ ಮೊದಲೇ ಏರ್ಪೋರ್ಟ್ ಖಾಸಗಿ ಕಂಪನಿ ಸುಪರ್ದಿಗೆ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಅನುದಾನದಡಿ ಹುಬ್ಬಳ್ಳಿ ವಿಮಾನ ನಿಲ್ದಾಣವು ಮೇಲ್ದರ್ಜೆಗೆ ಏರುತ್ತಿದೆ. ಹೊಸ ಟರ್ಮಿನಲ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ಭವಿಷ್ಯದಲ್ಲಿ ಇಲ್ಲಿಂದ 2.50 ಲಕ್ಷ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುಂತೆ ಅಭಿವೃದ್ಧಿ ಮಾಡಲಾಗುತ್ತಿದೆ. ಸದ್ಯ ಈ ಏರ್ಪೋರ್ಟ್ ಆದಾಯ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಕ್ಕೆ ಬಂಧಿದೆ. ಏರ್ಪೋರ್ಟ್ ಅನ್ನು ತಾತ್ಕಾಲಿಕವಾಗಿ ಖಾಸಗೀಕರಣ ಮಾಡಲು ಮುಂದಾಗಿದೆ.

ವಿಮಾನ ನಿಲ್ದಾಣದ ಅಭಿವೃದ್ಧಿ ಮತ್ತು ನಿರ್ವಹಣೆ ಗುತ್ತಿಗೆಯನ್ನು ಒಟ್ಟು 30 ವರ್ಷಗಳ ಅವಧಿಗೆ ಖಾಸಗಿ ಸಂಸ್ಥೆಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಆದಾಯ ತಂದುಕೊಡದ ಈ ನಿಲ್ದಾಣವು ಈಗಾಗಲೇ ಭುವನೇಶ್ವರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಜೊತೆ ವಿಲೀನಗೊಂಡಿದೆ ಎಂದು ಏರ್ಪೋರ್ಟ್ ಅಧಿಕಾರಿ ಮೂಲಗಳು ಮಾಹಿತಿ ನೀಡಿವೆ.

ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆ ಜವಾಬ್ದಾರಿಯನ್ನು ಅದಾನಿ ಸಮೂಹ ಸಂಸ್ಥೆಗೆ ವಹಿಸಿದ ಸಂದರ್ಭದಲ್ಲಿ ಇದನ್ನು ಖಂಡಿಸಿ ಕಾಂಗ್ರೆಸ್ ಸೇರಿ ವಿವಿಧ ಸಂಸ್ಥೆಗಳಿಂದ ಪ್ರತಿಭಟನೆ ವ್ಯಕ್ತವಾಗಿತ್ತು. ಆದಾಯ ಹಂಚಿಕೆ ಆಧಾರದ ಮೇಲೆ ದೆಹಲಿ ಮತ್ತು ಮುಂಬೈ ವಿಮಾನ ನಿಲ್ದಾಣಗಳ ನಿರ್ವಹಣೆ ಹೊಣೆ ಖಾಸಗಿ ಸಂಸ್ಥೆಗೆ ನೀಡಲಾಗಿದೆ. ವಾರ್ಷಿಕ ಆದಾಯದಲ್ಲಿ ಶೇಕಡ ಅರ್ಧದಷ್ಟು ಭಾರತ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ (ಎಎಐ) ಹೋಗುತ್ತದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಆಧರಿಸಿ, ಎಎಐ ಪ್ರಾಧಿಕಾರಕ್ಕೆ ಹಣ ಪಾವತಿ ಆಗುತ್ತದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಖಾಸಗಿ ಹೊಣೆ ಯಾವ ಸ್ವರೂಪದ್ದು ಎಂಬುದು ಇನ್ನೂ ಅಸ್ಪಷ್ಟವಾಗಿದೆ. ಹೆಚ್ಚು ಮೊತ್ತಕ್ಕೆ ಬಿಡ್ಡಿಂಗ್ ಸಲ್ಲಿಸುವ ಕಂಪನಿಗೆ ಟೆಂಡರ್ ನೀಡಲಾಗುತ್ತದೆ. ಸದ್ಯ ನಿಲ್ದಾಣದಲ್ಲಿ ಎಎಐ ಪ್ರಾಧಿಕಾರದಡಿ 70 ಸಿಬ್ಬಂದಿ ಇದ್ದಾರೆ. ಉಳಿದ 250ಕ್ಕೂ ಹೆಚ್ಚು ಸಿಬ್ಬಂದಿ ವಿವಿಧ ಏಜೆನ್ಸಿಗಳಿಂದ ನೇಮಕಗೊಂಡಿದ್ದಾರೆ. ಟೆಂಡರ್ ಪಡೆದ ಕಂಪನಿ ತಮಗೆ ಬೇಕಾದ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಿದೆ.

ಹೊಸ ಟರ್ಮಿನಲ್ ಕಟ್ಟಡ ಕಾಮಗಾರಿ ವಿಮಾನ ನಿಲ್ದಾಣದಲ್ಲಿ ರೂಪಾಯಿ 320 ಕೋಟಿ ವೆಚ್ಚದಲ್ಲಿ ನೂತನ ಟರ್ಮಿನಲ್ ಕಟ್ಟಡ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ. ಮುಂದಿನ ವರ್ಷ 2026ರ ಮಾರ್ಚ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ನಿಲ್ದಾಣದ ನಿರ್ವಹಣೆ, ಅಭಿವೃದ್ಧಿ ಹೊಣೆ ಮಾತ್ರ ಖಾಸಗಿ ಸಂಸ್ಥೆ ವಹಿಸಿಕೊಳ್ಳಲಿದೆ. ವಾಯು ಸಂಚಾರ ದಟ್ಟಣೆ ನಿಯಂತ್ರಣ (ಎಟಿಸಿ) ಮತ್ತು ಸಂವಹನ, ನ್ಯಾವಿಗೇಷನ್ ಮತ್ತು ಕಣ್ಣಾವಲು ವ್ಯವಸ್ಥೆ (ಸಿಎನ್ಎಸ್) ಎಲ್ಲವನ್ನೂ ಎಎಐ ನಿರ್ವಹಿಸಲಿದೆ. ನಿಲ್ದಾಣದಲ್ಲಿ ಸೌಲಭ್ಯಗಳು ಇಲ್ಲ! ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಒಂದು ಕೆಫೆ, ವಿಐಪಿ ಲಾಂಜ್ ಇದೆ. ಇರ ಹೊರತು ಇಲ್ಲಿ ಬೇರೆ ಬೇರೆ ಸೌಲಭ್ಯಗಳು ಇಲ್ಲ. ನಿಲ್ದಾಣವನ್ನು ಖಾಸಗಿಗೆ ನೀಡಿದರೆ, ಉತ್ತಮ ನಿರ್ವಹಣೆ ಮತ್ತು ಅಭಿವೃದ್ಧಿ ಜೊತೆಗೆ ಹೆಚ್ಚಿನ ಸೌಲಭ್ಯ ಸಿಗುವ ವಿಶ್ವಾಸ ಇದೆ. ಹೀಗಾಗಿಯೇ ಖಾಸಗಿಯವರಿಗೆ ನೀಡಲು ಮುಂದಾಗಿದೆ. ಓಲಾ, ಉಬರ್ ಸೇವೆ ಲಭ್ಯವಾಗಲಿದೆ. ಪ್ರಯಾಣಿಕರ ಸಂಖ್ಯೆಯೂ ಹೆಚ್ಚುತ್ತದೆ’ ಎಂದು ಹುಬ್ಬಳ್ಳಿ ಏರ್ಪೋರ್ಟ್ ಬಳಕೆದಾರರ ಸಲಹಾ ಸಮಿತಿ ಸದಸ್ಯರೊಬ್ಬರು ಮಾಹಿತಿ ನೀಡಿದರು. 11 ಏರ್ಪೋರ್ಟ್ ಖಾಸಗೀಕರಣ ಹುಬ್ಬಳ್ಳಿಯಿಂದ ಪ್ರತಿ ವಾರ ಇಂಡಿಗೊ ಸಂಸ್ಥೆಯ 78 ವಿಮಾನಗಳು ಕಾರ್ಯಾಚರಣೆ ನಡೆಸುತ್ತವೆ. ಬೆಂಗಳೂರು, ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಪುಣೆಗೆ ವಿಮಾನಯಾನ ಸಾರಿಗೆ ಸೇವೆ ಲಭ್ಯ ಇದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಜೊತೆ ದೇಶದ ಇತರ 11 ನಿಲ್ದಾಣಗಳು ಖಾಸಗೀಕರಣಗೊಳ್ಳಲಿವೆ. 6 ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆ ಇವೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದರು.

Leave a Reply

Your email address will not be published. Required fields are marked *