ಹುಬ್ಬಳ್ಳಿ: ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಮಹದಾಯಿ ಯೋಜನೆಗೆ ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದರು. ಅಲ್ಲದೇ, ಕರ್ನಾಟಕ ಲೋಕಸೇವ ಆಯೋಗ (KPSC) ಆಯೋಗ ಬಗ್ಗೆ ಕೇಂದ್ರ ಸಚಿವರ ಹೇಳಿಕೆಗೆ ಸಿಎಂ ಸಿಡಿಮಿಡಿಗೊಂಡರು.

ಭಾನುವಾರ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೆ.ಪಿ.ಎಸ್.ಸಿ ಯಲ್ಲಿ ಅವ್ಯವಸ್ಥೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಸಿಡಿಮಿಡಿಗೊಂಡ ಸಿಎಂ, ಪ್ರಹ್ಲಾದ್ ಜೋಶಿ ಮೊದಲು ಮಹದಾಯಿ ಯೋಜನೆ, ನಾಲಾ ಜೋಡಣೆ ಬಗ್ಗೆ ಮಾತಾಡಲಿ ಎಂದು ಕಿಡಿಕಾರಿದರು.
ಉತ್ತರ ಕರ್ನಾಟಕದ ಮಹದಾಯಿ ಯೋಜನೆಗೆ ಹಸರು ನ್ಯಾಯಧೀಕರಣದಿಂದ ಯಾಕೆ ಕೊಡಿಸುತ್ತಿಲ್ಲ.? ಗೋವಾಕ್ಕೆ ಹೆದರಿಕೊಂಡು ಕೇಂದ್ರ ಬಿಜೆಪಿ ಸರ್ಕಾರದ ನಾಯಕರು ಅನುಮತಿ ಕೊಡಿಸುತ್ತಿಲ್ಲ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಅವರ ಮುಂದೆ ಮಾತನಾಡುತ್ತಿಲ್ಲ. ರಾಜ್ಯದಿಂದ ಅನೇಕ ಸಲ ಕೇಂದ್ರಕ್ಕೆ ಹೋಗಿ ಮನವಿ ಮಾಡಿದ್ದೇವೆ. ಆದರೂ ಪ್ರಯೋಜನವಾಗಿಲ್ಲ ಎಂದು ಅವರು ವಿವರಿಸಿದರು. ಮೇ 20ಕ್ಕೆ ಬೃಹತ್ ಸಮಾವೇಶ ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಹಿನ್ನೆಲೆ ಮೇ 20ಕ್ಕೆ ವಿಜಯನಗರ ದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ. ಸರ್ಕಾರದ ಸಾಧನೆಗಳನ್ನು ಜನರ ಮುಂದಿಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹೇಳಿದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಿಸಿಕೊಡಿ ನಾವು ಮಹಾದಾಯಿ ಯೋಜನೆ ಜಾರಿಗೊಳಿಸುತ್ತೇವೆ ಎಂದು ರಾಜ್ಯ ಬಿಜೆಪಿ ನಾಯಕರು ಹೇಳಿ ಗೆದ್ದು ಬಂದಿದ್ದರು. ಈ ಬಗ್ಗೆ ಯಾವ ಅಂತಿಮ ನಿರ್ಣಯವು ಪ್ರಕಟವಾಗಿಲ್ಲ. ಕಾಂಗ್ರೆಸ್ ಬಿಜೆಪಿ ಎರಡು ಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ಮುಂದುವರೆಸಿವೆ.
ಇನ್ನು ಕರ್ನಾಟಕ ಲೋಕಸೇವಾ ಆಯೋಗದ 384 ವಿವಿಧ ಹುದ್ದೆಗಳ ಪರೀಕ್ಷೆಯಲ್ಲಿ ಲೋಪದೋಷ ಉಂಟಾಗಿದೆ. ಎರಡು ಬಾರಿ ಪೂರ್ವಭಾವಿ ಪರೀಕ್ಷೆ ನಡೆಸಿದರೂ ಮತ್ತೆ ಮತ್ತೆ ಲೋಪವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಹಾಗೂ ಆಯೋಗದ ಆಡಳಿತದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಅವ್ಯವಸ್ಥೆಯನ್ನು ಬಿಜೆಪಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಸ್ತಾಪಿಸಿದ್ದ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. ಮೊದಲು ಅವರು ಮಹದಾಯಿ ಯೋಜನೆ ಬಗ್ಗೆ ಮಾತನಾಡಲಿ ಎಂದರು.ಹುಬ್ಬಳ್ಳಿ: ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಮಹದಾಯಿ ಯೋಜನೆಗೆ ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದರು. ಅಲ್ಲದೇ, ಕರ್ನಾಟಕ ಲೋಕಸೇವ ಆಯೋಗ (KPSC) ಆಯೋಗ ಬಗ್ಗೆ ಕೇಂದ್ರ ಸಚಿವರ ಹೇಳಿಕೆಗೆ ಸಿಎಂ ಸಿಡಿಮಿಡಿಗೊಂಡರು.
ಭಾನುವಾರ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೆ.ಪಿ.ಎಸ್.ಸಿ ಯಲ್ಲಿ ಅವ್ಯವಸ್ಥೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಸಿಡಿಮಿಡಿಗೊಂಡ ಸಿಎಂ, ಪ್ರಹ್ಲಾದ್ ಜೋಶಿ ಮೊದಲು ಮಹದಾಯಿ ಯೋಜನೆ, ನಾಲಾ ಜೋಡಣೆ ಬಗ್ಗೆ ಮಾತಾಡಲಿ ಎಂದು ಕಿಡಿಕಾರಿದರು.
ಉತ್ತರ ಕರ್ನಾಟಕದ ಮಹದಾಯಿ ಯೋಜನೆಗೆ ಹಸರು ನ್ಯಾಯಧೀಕರಣದಿಂದ ಯಾಕೆ ಕೊಡಿಸುತ್ತಿಲ್ಲ.? ಗೋವಾಕ್ಕೆ ಹೆದರಿಕೊಂಡು ಕೇಂದ್ರ ಬಿಜೆಪಿ ಸರ್ಕಾರದ ನಾಯಕರು ಅನುಮತಿ ಕೊಡಿಸುತ್ತಿಲ್ಲ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಅವರ ಮುಂದೆ ಮಾತನಾಡುತ್ತಿಲ್ಲ. ರಾಜ್ಯದಿಂದ ಅನೇಕ ಸಲ ಕೇಂದ್ರಕ್ಕೆ ಹೋಗಿ ಮನವಿ ಮಾಡಿದ್ದೇವೆ. ಆದರೂ ಪ್ರಯೋಜನವಾಗಿಲ್ಲ ಎಂದು ಅವರು ವಿವರಿಸಿದರು. ಮೇ 20ಕ್ಕೆ ಬೃಹತ್ ಸಮಾವೇಶ ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಹಿನ್ನೆಲೆ ಮೇ 20ಕ್ಕೆ ವಿಜಯನಗರ ದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ. ಸರ್ಕಾರದ ಸಾಧನೆಗಳನ್ನು ಜನರ ಮುಂದಿಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹೇಳಿದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಿಸಿಕೊಡಿ ನಾವು ಮಹಾದಾಯಿ ಯೋಜನೆ ಜಾರಿಗೊಳಿಸುತ್ತೇವೆ ಎಂದು ರಾಜ್ಯ ಬಿಜೆಪಿ ನಾಯಕರು ಹೇಳಿ ಗೆದ್ದು ಬಂದಿದ್ದರು. ಈ ಬಗ್ಗೆ ಯಾವ ಅಂತಿಮ ನಿರ್ಣಯವು ಪ್ರಕಟವಾಗಿಲ್ಲ. ಕಾಂಗ್ರೆಸ್ ಬಿಜೆಪಿ ಎರಡು ಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ಮುಂದುವರೆಸಿವೆ.
ಇನ್ನು ಕರ್ನಾಟಕ ಲೋಕಸೇವಾ ಆಯೋಗದ 384 ವಿವಿಧ ಹುದ್ದೆಗಳ ಪರೀಕ್ಷೆಯಲ್ಲಿ ಲೋಪದೋಷ ಉಂಟಾಗಿದೆ. ಎರಡು ಬಾರಿ ಪೂರ್ವಭಾವಿ ಪರೀಕ್ಷೆ ನಡೆಸಿದರೂ ಮತ್ತೆ ಮತ್ತೆ ಲೋಪವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಹಾಗೂ ಆಯೋಗದ ಆಡಳಿತದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಅವ್ಯವಸ್ಥೆಯನ್ನು ಬಿಜೆಪಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಸ್ತಾಪಿಸಿದ್ದ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. ಮೊದಲು ಅವರು ಮಹದಾಯಿ ಯೋಜನೆ ಬಗ್ಗೆ ಮಾತನಾಡಲಿ ಎಂದರು.