ಹುಬ್ಬಳ್ಳಿ || ಜ.10 ರಿಂದ ಪ್ರಯಾಗರಾಜ್ ಮಹಾ ಕುಂಭಮೇಳ: IRCTCಯಿಂದ ವಿಶೇಷ ಟೆಂಟ್ ಸೌಲಭ್ಯ; ಬುಕಿಂಗ್ ಆರಂಭ

ಹುಬ್ಬಳ್ಳಿ || ಜ.10 ರಿಂದ ಪ್ರಯಾಗರಾಜ್ ಮಹಾ ಕುಂಭಮೇಳ: IRCTCಯಿಂದ ವಿಶೇಷ ಟೆಂಟ್ ಸೌಲಭ್ಯ; ಬುಕಿಂಗ್ ಆರಂಭ

ಹುಬ್ಬಳ್ಳಿ: ಪ್ರತಿ 12 ವರ್ಷಕ್ಕೊಮ್ಮೆ ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ಮಹಾ ಕುಂಭಮೇಳ ನಡೆಯುತ್ತದೆ. ಜನವರಿ 10 ರಿಂದ ಫೆ.28 ಮಹಾ ಕುಂಭಮೇಳದ ಹಿನ್ನೆಲೆಯಲ್ಲಿ ಐಆರ್ಸಿಟಿಸಿಯು (ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ) ಪ್ರಯಾಗರಾಜ್ನಲ್ಲಿ ಟೆಂಟ್ ಸಿಟಿ ನಿರ್ಮಾಣ ಮಾಡಿದೆ ಎಂದು ಐಆರ್ಸಿಟಿಸಿ ಟೂರಿಸಂ ಕಾರ್ಪೊರೇಷನ್ ಮೇಲ್ವಿಚಾರಕರಾದ ಹರ್ಷದೀಪ್ ಹಾಗೂ ನವೀನ್ ಅವರು ಮಾಹಿತಿ ನೀಡಿದ್ದಾರೆ.

ಮಹಾ ಕುಂಭಮೇಳವು ನಾಲ್ಕು ಪವಿತ್ರ ಸ್ಥಳಗಳಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ನಡೆಸುವ ಹಿಂದೂಗಳ ತೀರ್ಥಯಾತ್ರೆಯಾಗಿದೆ. ಹೀಗಾಗಿ, ಈ ಬಾರಿ ಪ್ರಯಾಗ್ರಾಜ್ಗೆ ಲಕ್ಷಾಂತರ ಜನ ಬರುತ್ತಾರೆ. ಸಂಗಮದಲ್ಲಿ ಸ್ನಾನ ಮಾಡಿ ಪಾಪ ನಿವಾರಣೆಯಾಗಿ ಮೋಕ್ಷ ಪ್ರಾಪ್ತಿಗಾಗಿ ಪ್ರಾರ್ಥಿಸುತ್ತಾರೆ. ಅಲ್ಲಿಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಐಆರ್ಸಿಟಿಸಿ ಸುಸಜ್ಜಿತವಾದ ಅತ್ಯಾಧುನಿಕ ಟೆಂಟ್ ನಿರ್ಮಿಸಿ ವಸತಿ ವ್ಯವಸ್ಥೆ ಕಲ್ಪಿಸಿದೆ. ಎರಡು ವಿಧದ ಟೆಂಟ್ ವ್ಯವಸ್ಥೆ ಇದ್ದು, ಅದಕ್ಕೆ ತಕ್ಕಂತೆ ದರ ನಿಗದಿ ಪಡಿಸಲಾಗಿದೆ. ಬೆಳಗಿನ ಉಪಹಾರ, ಭೋಜನವೂ ಇದರಲ್ಲಿ ಒಳಗೊಂಡಿದೆ ಎಂದು ತಿಳಿಸಿದ್ದಾರೆ.

ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರದಲ್ಲಿ ಪವಿತ್ರ ಸ್ನಾನ ಮಾಡಲು ಬರುವ ಭಕ್ತರಿಗೆ ಈ ವಸತಿ ವ್ಯವಸ್ಥೆ ಅನುಕೂಲವಾಗಲಿದೆ. ಪ್ರಾರಂಭಿಕ 6,995 ರೂ.ಗಳಿಂದ ವಿವಿಧ ಬಗೆಯ ದರ ನಿಗದಿಪಡಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ, ಡಿಲಕ್ಸ್ ಹಾಗೂ ಪ್ರೀಮಿಯಂ ವಿಧಗಳಿದ್ದು, ಸಿಂಗಲ್ ಹಾಗೂ ಡಬಲ್ ಟೆಂಟ್ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ಈಗಾಗಲೇ ಬುಕಿಂಗ್ ಆರಂಭಗೊಂಡಿದ್ದು, ಆಸಕ್ತರು ಆನ್ಲೈನ್ ಹಾಗೂ ಆಫ್ಲೈನ್ನಲ್ಲಿ ಹುಬ್ಬಳ್ಳಿ, ಬೆಂಗಳೂರು, ಮೈಸೂರು ರೈಲ್ವೆ ನಿಲ್ದಾಣದ ಕಚೇರಿಗಳಲ್ಲಿ ಬುಕ್ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *