ಹುಬ್ಬಳ್ಳಿ: 10 ಪಾಸ್ & ಫೇಲ್ ಆಗಿರುವ ಯುವಕರಿಗೆ ಉದ್ಯೋಗ ತರಬೇತಿಗೆ ಸಂಬಂಧಿಸಿದಂತೆ ಭರ್ಜರಿ ಗುಡ್ನ್ಯೂಸ್ ಇಲ್ಲಿದೆ. ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಹತ್ತನೇ ತರಗತಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಯುವಕರಿಗೆ ‘ಟೂಲರೂಮ್ ಮಶಿನಿಸ್ಟ್’ ತಾಂತ್ರಿಕ ವೃತ್ತಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿ ಹೊಂದಿದ ಅಭ್ಯರ್ಥಿಗಳಿಗೆ ಕೈಗಾರಿಕೆಗಳಲ್ಲಿ ಹೆಚ್ಚಿನ ಬೇಡಿಕೆಯಿರುತ್ತದೆ. ಒಂದೇ ಕೋರ್ಸ್ನಲ್ಲಿ ಟರ್ನರ್, ಮಿಲ್ಲರ್, ಗ್ರೇಂಡರ್, ಸಿಎನ್ಸಿ, ಕ್ಯಾಡ್-ಕ್ಯಾಮ್ ಮತ್ತುಟೂಲ್ ಆಂಡ್ಡೈ ಮೇಕಿಂಗ್ ಟ್ರೇಡ್ಗಳಲ್ಲಿ ಆನ್ ದಿ ಜಾಬ್ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶಗಳು ಸಿಗಲಿವೆ. ಜೊತೆಗೆ ಅಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ್ಯ ಹಾಗೂ ಉದ್ಯೋಗ ಕೌಶಲ್ಯಗಳನ್ನು ಕಲಿಸಲಾಗುತ್ತದೆ.
ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ತರಬೇತಿ ಸೌಲಭ್ಯಗಳನ್ನು ಅಳವಡಿಸಿಕೊಂಡಿದ್ದು, ಕೈಗಾರಿಕೆಗಳಲ್ಲಿ ಅನುಭವ ಹೊಂದಿದ ಶಿಕ್ಷಕರನ್ನು ಹೊಂದಿದೆ. ತರಬೇತಿಯ ನಂತರ ವಿದ್ಯಾರ್ಥಿಗಳಿಗೆ ಟೂಲಿಂಗ್, ವಿಮಾನ ತಯಾರಿಕೆ, ಮತ್ತು ಅಟೋ ಮೊಬೈಲ್ ವಲಯಗಳ ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸಿ ಕೊಡಲಾಗುವುದು. ಕಳೆದ ವರ್ಷ ಜಿಟಿಟಿಸಿಯಲ್ಲಿ ತರಬೇತಿ ಪಡೆದ ಎಲ್ಲ ಅಭ್ಯರ್ಥಿಗಳು ಕ್ಯಾಂಪಸ್ ಸಂದರ್ಶನದ ಮೂಲಕ ಏರೋಸ್ಪೇಸ್ ಉತ್ಪಾದನೆ ಮತ್ತು ಟೂಲರೂಮ್ ಕೈಗಾರಿಕೆಗಳಲ್ಲಿ ನೇಮಕಾತಿ ಹೊಂದಿರುತ್ತಾರೆ ಎಂದು ಹೇಳಲಾಗಿದೆ. ಆಸಕ್ತ ಅಭ್ಯರ್ಥಿಗಳು ಮೇ. 30ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ತರಬೇತಿಗಳು ಜೂನ್ 2 ರಿಂದ ಪ್ರಾರಂಭವಾಗಲಿವೆ. ಆಸಕ್ತ ಅಭ್ಯರ್ಥಿಗಳು ಹುಬ್ಬಳ್ಳಿ ಮತ್ತು ನರಗುಂದ ಕೇಂದ್ರಗಳಿಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಜಿಟಿಟಿಸಿ, ಗೋಕುಲ ರಸ್ತೆ, ಹುಬ್ಬಳ್ಳಿ ಕಚೇರಿ ಅಥವಾ ದೂರವಾಣಿ 8183860552, 9902101010 ಮತ್ತು ಜಿಟಿಟಿಸಿ, ಅಳಗವಾಡಿ ರಸ್ತೆ, ನರಗುಂದ ಕಚೇರಿ ಅಥವಾ ದೂರವಾಣಿ 8088536896 ಸಂಪರ್ಕಿಸುವಂತೆ ಜಿಟಿಟಿಸಿ ಪ್ರಾಂಶುಪಾಲರಾದ ಮಾರುತಿ ಭಜಂತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ.16 ನೇರ ಸಂದರ್ಶನ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನೇರ ಸಂದರ್ಶನವನ್ನು ಮೇ.16 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯಾನಗರದ ಅನ್ನಪೂರ್ಣ ಪ್ರೈವೇಟ್ ಪೈನಾನ್ಸ್ ಲಿಮಿಟೆಡ್ನಲ್ಲಿ ಹಮ್ಮಿಕೊಳ್ಳಲಾಗಿದೆ.
ಖಾಸಗಿ ವಲಯದ ಉದ್ಯೋಗದಾತರುಗಳು ಭಾಗವಹಿಸಲಿದ್ದು, ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ. ಪಿಯುಸಿ, ಯಾವುದೇ ಪದವಿ ಪಾಸಾದ 18 ರಿಂದ 32 ವಯೋಮಿತಿ ಹೊಂದಿದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ನೇರ ಸಂದರ್ಶನಕ್ಕೆ ಭಾಗವಹಿಸುವ ಅಭ್ಯರ್ಥಿಗಳು https://rb.gy/cigcx1 ವೆಬ್ಸೈಟ್ ಮುಖಾಂತರ ನೋಂದಣಿ ಮಾಡಿಕೊಂಡು ಸಂದರ್ಶನಕ್ಕೆ ಹಾಜರಾಗಬೇಕು. ಅರ್ಹ ಅಭ್ಯರ್ಥಿಗಳು ತಮ್ಮ ಆಧಾರ ಕಾರ್ಡ, ಬಯೋಡಾಟಾ (ರೆಸ್ಯೂಮ) ಗಳ ಹೆಚ್ಚಿನ ಪ್ರತಿಗಳೊಂದಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0836-2225288, 9535360259, 8453208555 ಕಚೇರಿ ವೇಳೆಯಲ್ಲಿ ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.