ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ಅನುದಾನ: 28,608 ಕೋಟಿ ರೂ. CM ಸಿದ್ದರಾಮಯ್ಯ ಘೋಷಣೆ.

Karnataka Budget 2026: Big announcements for the Kannada film industry.

2026–27ನೇ ಸಾಲಿನ ಬಜೆಟ್‌ನಲ್ಲಿ ಮಹಿಳಾ ಸಬಲೀಕರಣ, ಆರೋಗ್ಯ, ಮೂಲಸೌಕರ್ಯ ಮತ್ತು ಕೃಷಿ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು.

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ 2026-27ನೇ ಸಾಲಿನ ಕರ್ನಾಟಕ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ದಾಖಲೆಯ 17ನೇ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ, ರಾಜ್ಯದ ಅಭಿವೃದ್ಧಿ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ. ಈ ಬಜೆಟ್‌ನಲ್ಲಿ ವಿಶೇಷವಾಗಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಸಿದ್ದರಾಮಯ್ಯ ಹೇಳಿದರು. ಜೊತೆಗೆ ಮೂಲಸೌಕರ್ಯ ಅಭಿವೃದ್ಧಿಗೂ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದರು.

ಬೆಂಗಳೂರಿನಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ

ಆರೋಗ್ಯ ಕ್ಷೇತ್ರದಲ್ಲೂ ಹಲವು ಘೋಷಣೆಗಳನ್ನು ಮಾಡಲಾಗಿದೆ. ಬೆಂಗಳೂರಿನಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರವನ್ನು ಸ್ಥಾಪಿಸುವುದಾಗಿ ಘೋಷಿಸಲಾಗಿದೆ. ಇದೇ ವೇಳೆ ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ ಮತ್ತು ಕೆಜಿಎಫ್ ಪ್ರದೇಶಗಳಲ್ಲಿನ ESI ಆಸ್ಪತ್ರೆಗಳನ್ನು ಉನ್ನತೀಕರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನೂ ವಿಜಯಪುರದಲ್ಲಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲ ಗೃಹ ನಿರ್ಮಾಣ ಘಟಕ ಸ್ಥಾಪಿಸುವ ಯೋಜನೆಯನ್ನೂ ಘೋಷಿಸಲಾಗಿದೆ.

ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾತನಾಡಿದ ಸಿಎಂ, ಕರ್ನಾಟಕ ಆರ್ಥಿಕ ಅಭಿವೃದ್ಧಿಯಲ್ಲಿ ದೇಶದ ಮಟ್ಟದಲ್ಲಿ ಮುಂಚೂಣಿಯಲ್ಲಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. ಜೊತೆಗೆ ಒಕ್ಕೂಟ ಸರ್ಕಾರವು ರಾಜ್ಯಗಳತ್ತ ಇನ್ನಷ್ಟು ಸಂವೇದನಾಶೀಲವಾಗಿ ವರ್ತಿಸಬೇಕು ಎಂದು ಅಭಿಪ್ರಾಯಪಟ್ಟರು.

ಒಟ್ಟಾರೆ, 2026-27ರ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳು, ಆರೋಗ್ಯ, ಮೂಲಸೌಕರ್ಯ ಹಾಗೂ ಕೃಷಿ ಕ್ಷೇತ್ರಗಳಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿರುವುದು ಗಮನಾರ್ಹವಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *