11,127 ಸಹಾಯಕ ಲೋಕೋ ಪೈಲಟ್ ಹುದ್ದೆಗೆ ಅರ್ಜಿ ಆಹ್ವಾನ.
ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಬರುವ ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶಾದ್ಯಂತ ಖಾಲಿ ಇರುವ ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 11,127 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಬೆಂಗಳೂರು, ಮುಂಬೈ, ಚೆನ್ನೈ, ಸಿಕಂದರಾಬಾದ್ ಸೇರಿದಂತೆ ದೇಶದ ಪ್ರಮುಖ ರೈಲ್ವೆ ವಲಯಗಳಲ್ಲಿ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಲಭಿಸಿದೆ.
ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ ಸಂಬಂಧಿತ ಟ್ರೇಡ್‌ಗಳಲ್ಲಿ ಐಟಿಐ (ITI) ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜುಲೈ 1, 2026 ಕ್ಕೆ ಅನ್ವಯವಾಗುವಂತೆ 18 ರಿಂದ 30 ವರ್ಷಗಳ ಒಳಗಿರಬೇಕು. ನಿಯಮಾನುಸಾರ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ವಿಧಾನ ಮತ್ತು ವೇತನ ಶ್ರೇಣಿ:
ಅಭ್ಯರ್ಥಿಗಳನ್ನು ಎರಡು ಹಂತದ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಗಳ (CBT 1 ಮತ್ತು CBT 2) ಮೂಲಕ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ದಾಖಲೆ ಪರಿಶೀಲನೆ ನಡೆಸಲಾಗುವುದು. ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಆರಂಭಿಕ ವೇತನವಾಗಿ ರೂ. 19,900 ರೊಂದಿಗೆ ರೈಲ್ವೆ ಇಲಾಖೆಯ ನಿಯಮದಂತೆ ಇತರೆ ಭತ್ಯೆಗಳನ್ನು ನೀಡಲಾಗುವುದು. ಇದು ಕೇಂದ್ರ ಸರ್ಕಾರದ ಉದ್ಯೋಗವಾಗಿದ್ದು, ಆಕರ್ಷಕ ಸೌಲಭ್ಯಗಳನ್ನು ಒಳಗೊಂಡಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ ಮತ್ತು ದಿನಾಂಕ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಪ್ರಕ್ರಿಯೆಯು ಮೇ 15, ರಿಂದ ಅಧಿಕೃತವಾಗಿ ಪ್ರಾರಂಭವಾಗಲಿದ್ದು, ಆಸಕ್ತರು ಜೂನ್ 14 ರೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಕೊನೆಯ ಕ್ಷಣದ ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ಅಭ್ಯರ್ಥಿಗಳು ಮೊದಲೇ ಅರ್ಜಿ ಸಲ್ಲಿಸುವುದು ಸೂಕ್ತ.
For More Updates Join our WhatsApp Group :




