ನೇಪಾಳದಿಂದ ನೂರಾರು ಕೋಟಿ ರೂ. ಸೈಬರ್ ವಂಚನೆ.

ನೇಪಾಳದಿಂದ ನೂರಾರು ಕೋಟಿ ರೂ. ಸೈಬರ್ ವಂಚನೆ.

11 ಆರೋಪಿಗಳು ಮಂಗಳೂರು ಪೊಲೀಸರ ಜಾಲ.

ಮಂಗಳೂರು: ನೇಪಾಳದಲ್ಲಿ ಕುಳಿತು ಭಾರತವನ್ನೇ ಗುರಿಯಾಗಿಸಿಕೊಂಡು ನೂರಾರು ಕೋಟಿ ರೂಪಾಯಿ ವಂಚನೆ ಮಾಡುತ್ತಿದ್ದ ಅತಿದೊಡ್ಡ ಸೈಬರ್ ಫ್ರಾಡ್ ನೆಟ್ವರ್ಕ್ ಅನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ನೇಪಾಳ ಪೊಲೀಸರ ಸಹಕಾರದೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ, ಅಲ್ಲಿಯೇ ತಂಗಿ ವಂಚನೆ ನಡೆಸುತ್ತಿದ್ದ 11 ಮಂದಿ ಭಾರತೀಯ ಮೂಲದ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ವಂಚನೆಯ ಜಾಲವನ್ನು ನಿಯಂತ್ರಿಸುತ್ತಿದ್ದ ಚೀನಾದ ಹ್ಯಾಂಡ್ಲರ್​ಗಳು

ಮಂಗಳೂರಿನ ಸೈಬರ್ ಎಕನಾಮಿಕ್ ನಾರ್ಕೋಟಿಕ್ಸ್ (CEN) ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ತನಿಖೆಯ ಜಾಡು ಹಿಡಿದು ಆರೋಪಿಗಳವರೆಗೆ ಪೊಲೀಸರು ತಲುಪಿದ್ದರು. ಬಂಧಿತ ತಂಡದಲ್ಲಿ ಭಾರತೀಯರ ಜೊತೆಗೆ ಚೀನಾ ಮೂಲದ ವಂಚಕರು ಸೇರಿದ್ದು, ಇಡೀ ಜಾಲವನ್ನು ಚೀನಾದ ಹ್ಯಾಂಡ್ಲರ್‌ಗಳು ನಿಯಂತ್ರಿಸುತ್ತಿದ್ದರು ಎಂಬುದು ತಿಳಿದುಬಂದಿದೆ. ಆರೋಪಿಗಳಿಂದ ಲ್ಯಾಪ್‌ಟಾಪ್‌ಗಳು, 21 ಮೊಬೈಲ್ ಫೋನ್‌ಗಳು, 20 ವಿವಿಧ ಕಂಪನಿಯ ಸಿಮ್ ಕಾರ್ಡ್‌ಗಳು ಹಾಗೂ 20 ಬ್ಯಾಂಕ್ ಡೆಬಿಟ್–ಕ್ರೆಡಿಟ್ ಕಾರ್ಡ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಒಂದೇ ಖಾತೆಯಿಂದ 167 ಕೋಟಿ ರೂ ಹಣ ವರ್ಗಾವಣೆ

ತನಿಖೆಯಲ್ಲಿ ಒಟ್ಟು 624 ಬ್ಯಾಂಕ್ ಖಾತೆಗಳ ವಿವರ ಪತ್ತೆಯಾಗಿದ್ದು, ಈ ಖಾತೆಗಳ ವಿರುದ್ಧ NCRP ಪೋರ್ಟಲ್‌ನಲ್ಲಿ 4580ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಒಂದು ಖಾತೆಯಲ್ಲೇ 167 ಕೋಟಿ ರೂಪಾಯಿ ಹಣ ವರ್ಗಾವಣೆ ನಡೆದಿರುವುದು ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ತನಿಖೆ ವೇಳೆ ವಂಚಕರು ಬಳಸಿದ್ದ ಉಳಿದ 10 ಬ್ಯಾಂಕ್ ಖಾತೆಗಳ ಪರಿಶೀಲನೆ ನಡೆಸಲಾಗಿದ್ದು, ಈ ಖಾತೆಗಳ ಮೂಲಕ ಸುಮಾರು 30.70 ಕೋಟಿ ರೂಪಾಯಿ ಹಣ ವರ್ಗಾವಣೆ ನಡೆದಿರುವುದು ಬೆಳಕಿಗೆ ಬಂದಿದೆ.

ಹೇಗೆ ನಡೀತಿತ್ತು ವಂಚನೆ?

ಸಾಮಾಜಿಕ ಜಾಲತಾಣಗಳ ಮೂಲಕ ಖಾತೆದಾರರು ಹಾಗೂ ಏಜೆಂಟರನ್ನು ನೇಮಿಸಿಕೊಂಡು, ದಿನಕ್ಕೆ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ವಂಚನೆ ಮಾಡಲಾಗುತ್ತಿತ್ತು. ವಂಚನೆಯ ಹಣವನ್ನು ಯುಎಸ್ ಡಾಲರ್‌ಗೆ ಪರಿವರ್ತಿಸಿ ವಿದೇಶಗಳಿಗೆ ಕಳುಹಿಸಲಾಗುತ್ತಿತ್ತು. ಈ ಜಾಲಕ್ಕೆ ಕಾಂಬೋಡಿಯಾದಲ್ಲಿರುವ ವಂಚನಾ ಬಿಪಿಓ ಸಹ ಬೆಂಬಲ ನೀಡುತ್ತಿದ್ದುದೂ ಪತ್ತೆಯಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *