ಭ್ರಷ್ಟ ಅಧಿಕಾರಿಗಳ ಬೇಟೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಭ್ರಷ್ಟ ಅಧಿಕಾರಿಗಳ ಬೇಟೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರ ದಾಳಿ ಮುಂದುವರಿದಿದೆ. ಶನಿವಾರ ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಆರೋಗ್ಯ ಕೊಡಿ ಎಂದು ಆಸ್ಪತ್ರೆಗೆ ಬಂದರೆ ಇವರು ಜೀವ ತೆಗೆಯುವ ಆಸ್ಪತ್ರೆ ನಿರ್ಮಾಣ ಮಾಡಿದ್ದಾರೆ. ರಾಜಕೀಯ ಪ್ರೇರಿತವಾಗಿ, ನೈತಿಕತೆ ಇಲ್ಲದೆ ಜನೌಷಧಿ ಕೇಂದ್ರಗಳನ್ನು

ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ ಸೇರಿ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆಯೇ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ್ ಶಿರೋಳ ಅವರ ಮನೆ, ಕಚೇರಿ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗಂಗಾಧರ್ ಮನೆ, ಕಚೇರಿಗಳ ಮೇಲೆ ಅವರ ಅಳಿಯ, ಭಾವನ ಮನೆ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ ಪಿ ಹಣಮಂತರಾಯ ನೇತೃತ್ವದಲ್ಲಿ ದಾಳಿ ನಡೆದಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ, ಹಾವೇರಿ ಜಿಲ್ಲೆಯಲ್ಲಿ ಕೂಡ ಲೋಕಾಯುಕ್ತ ದಾಳಿ ನಡೆದಿದೆ.

Leave a Reply

Your email address will not be published. Required fields are marked *