ಭಾರತ್ ಮಂಟಪದಲ್ಲಿ ಅಚ್ಚರಿ ಘಟನೆ.
ನವದೆಹಲಿ : ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಶರ್ಟ್ ಬಿಚ್ಚಿ, ಮೋದಿ ಹಾಗೂ ಟ್ರಂಪ್ ಫೋಟೋಗಳಿರುವ ಅಂಗಡಿಯನ್ನು ಕೈಯಲ್ಲಿ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಆ ಕಾರ್ಯಕರ್ತರು ಹೇಗೆ ಶೃಂಗಸಭೆಯ ಆವರಣದೊಳಗೆ ಪ್ರತಿಭಟನೆ ನಡೆಸಿದರು, ಈ ವೇಳೆ ಭದ್ರತಾ ಸಿಬ್ಬಂದಿ ಏನು ಮಾಡುತ್ತಿದ್ದರು ಎಂಬ ಪ್ರಶ್ನೆ ಎದ್ದಿದೆ.
ಹಲವು ದೇಶಗಳ ನಾಯಕರು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿರುವುದರಿಂದ ಕಾಂಗ್ರೆಸ್ನಿಂದ ನಡೆದ ಈ ಪ್ರತಿಭಟನೆ ಮೋದಿ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಪ್ರತಿಭಟನಾಕಾರರು ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ಘೋಷಣೆಗಳನ್ನು ಕೂಗಿದರು. ‘ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ’ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ಕೆಲವು ನಿಮಿಷಗಳ ಕಾಲ ನಡೆಯಿತು. ಕೊನೆಗೆ ಅವರನ್ನು ಒತ್ತಾಯವಾಗಿ ಸಭಾಂಗಣದಿಂದ ಹೊರಗೆ ಕರೆದೊಯ್ಯಲಾಯಿತು.
For More Updates Join our WhatsApp Group :




