ಉತ್ಪಾದನಾ ವಲಯ ಬಲಪಡಿಸುವ ದೂರದೃಷ್ಟಿ ನನಗಿದೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್?

ಬೆಂಗಳೂರು: ದೇಶಾದ್ಯಂತ ಉತ್ಪಾದನಾ ವಲಯವನ್ನು ಬಲಪಡಿಸುವ ದೂರದೃಷ್ಟಿ ನನಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾಗಿ ಕುಮಾರಸ್ವಾಮಿಯವರು ಇಂದು ಸಂಜೆ 5 ಗಂಟೆಗೆ ಅಧಿಕಾರ ಸ್ವೀಕರಿಸಲಿದ್ದಾರೆ.

ಈ ವಿಚಾರವನ್ನು ಕುಮಾರಸ್ವಾಮಿ ಅವರು ತಮಗೆ ಪ್ರಮುಖ ಖಾತೆ ನೀಡಿರುವುದಕ್ಕೆ ಕನ್ನಡಿಗರ ಪರವಾಗಿ ಪ್ರಧಾನಿ ಮೋದಿಯವರಿಗೆ ಧನ್ಯವಾದ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಸಮಸ್ಯೆಗಳನ್ನು ಬಗೆಹರಿಸುವ ಸವಾಲು ನಮ್ಮ ಮುಂದಿದೆ. ಮುಂದಿನ 15 ದಿನದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಇಲಾಖೆ ಕುರಿತು ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸಲಿದ್ದೇನೆ. ಪ್ರಧಾನಿ ಮೋದಿಯವರ ಮಾರ್ಗದರ್ಶನ ಪಡೆದು ಅವರ ಕನಸು ನನಸು ಮಾಡುವ ನಿಟ್ಟಿನಲ್ಲಿ ಸಚಿವನಾಗಿ ಕೆಲಸ ಮಾಡುತ್ತೇನೆಂದು ಹೇಳಿದರು

ಉತ್ಪಾದನಾ ಕ್ಷೇತ್ರದಲ್ಲಿ ಬಹಳಷ್ಟು ನಿರೀಕ್ಷೆಗಳಿವೆ. ಇಲಾಖೆಯಲ್ಲೂ ಹೊಸ ಬದಲಾವಣೆ ತರಲು ಪ್ರಯತ್ನ ಮಾಡುತ್ತೇನೆ. ಇದಕ್ಕಾಗಿ ದೇಶದಾದ್ಯಂತ ಸುತ್ತಾಡಲು ನಿರ್ಧರಿಸಿದ್ದೇನೆ. ಉದ್ಯಮಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆಂದು ತಿಳಿಸಿದರು

Leave a Reply

Your email address will not be published. Required fields are marked *