NEET ಪರೀಕ್ಷೆಯಲ್ಲಿ ಅಕ್ರಮ ಬಯಲು: ಬಿಹಾರದಲ್ಲಿ 11 ಅಭ್ಯರ್ಥಿಗಳಿಂದ ತಲಾ ₹40 ಲಕ್ಷ ಡೀಲ್

ಪಾಟ್ನಾ (ಬಿಹಾರ): ನೀಟ್​​ ಪರೀಕ್ಷೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಕೇಳಿ ಬರುತ್ತಿರುವ ನಡುವೆಯೇ ಬಿಹಾರದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೂ ಮೊದಲೇ ಪ್ರಶ್ನೆಪತ್ರಿಕೆಗಳನ್ನು ಹಂಚಿದ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಭ್ಯರ್ಥಿಗಳನ್ನು ಬಂಧಿಸಲಾಗಿದೆ. ಇನ್ನೂ, 9 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗಲೂ ಸೂಚಿಸಿದ್ದು, ಅವರು ಇದರಿಂದ ತಪ್ಪಿಸಿಕೊಂಡಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ ಪರೀಕ್ಷೆಯ ಹಿಂದಿನ ದಿನ ಅಭ್ಯರ್ಥಿಗಳಿಗೆ ಹಂಚಿದ್ದು, ಅವರು ಉತ್ತರಗಳನ್ನು ಕಂಠಪಾಠ ಮಾಡಿದ್ದರು. ಇದಕ್ಕೆ ಅವರ ಪೋಷಕರ ನೆರವೂ ಇತ್ತು ಎಂದು ಪೊಲೀಸರು ಶಂಕಿಸಿದ್ದಾರೆ. 9 ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರಶ್ನೆ ಪತ್ರಿಕೆಗಾಗಿ ಪ್ರತಿ ಅಭ್ಯರ್ಥಿಗಳೊಂದಿಗೆ 40 ಲಕ್ಷ ರೂಪಾಯಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಜೊತೆಗೆ ಅವರಿಗೆ ನಗರದ ಅತಿಥಿಗೃಹದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಗೆಸ್ಟ್ ಹೌಸ್ ರಿಜಿಸ್ಟರ್​ನಲ್ಲಿ ವಿದ್ಯಾರ್ಥಿ ಅನುರಾಗ್ ಯಾದವ್ ಹೆಸರು ದಾಖಲಾಗಿದ್ದು, ಅವರ ಕೊಠಡಿ ಸಂಖ್ಯೆ 440 ಎಂದು ನಮೂದಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಗ್ಯಾಂಗ್​ನ ಕಿಂಗ್​ಪಿನ್ ಸಿಕಂದರ್ ಎಲ್ಲರಿಗೂ ತಂಗಲು ವ್ಯವಸ್ಥೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ

ಇಬ್ಬರು ಅಭ್ಯರ್ಥಿಗಳು ಪೊಲೀಸರ ವಶ: ಈಗಾಗಲೇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಆರ್ಥಿಕ ಅಪರಾಧಗಳ ಘಟಕವು 11 ಅಭ್ಯರ್ಥಿಗಳ ರೋಲ್ ಸಂಖ್ಯೆ ಮತ್ತು ರೋಲ್ ಕೋಡ್‌ಗಳನ್ನು ಪಡೆದುಕೊಂಡಿದೆ. ಅದರಲ್ಲಿ ಇಬ್ಬರು ಅಭ್ಯರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ಉಳಿದ 9 ಮಂದಿಯ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ.

Leave a Reply

Your email address will not be published. Required fields are marked *