ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಹೋಟೆಲ್‌ಗಳಿಗೆ ಸಿಲಿಂಡರ್ ಕೊರತೆ.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ಎಲ್ಪಿಜಿ ಸಿಲಿಂಡರ್ ಬಿಕ್ಕಟ್ಟನ್ನು ಎದುರಿಸುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಿಲಿಂಡರ್ ಸಿಗದೆ ಹೋಟೆಲ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಲಿಂಡರ್ಗಳು ಬ್ಲ್ಯಾಕ್ ಮಾರ್ಕೆಟ್ನಲ್ಲಿ ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟವಾಗುತ್ತಿದ್ದರೂ ಅವುಗಳ ಲಭ್ಯತೆಯೂ ಕಷ್ಟಸಾಧ್ಯವಾಗಿದೆ. ಇದರಿಂದ ಹಲವು ಹೋಟೆಲ್‌ಗಳು ಮುಚ್ಚುವ ಪರಿಸ್ಥಿತಿ ತಲುಪಿವೆ ಅಥವಾ ತಮ್ಮ ಮೆನುವಿನ ಐಟಂಗಳನ್ನು ಗಣನೀಯವಾಗಿ ಕಡಿಮೆ ಮಾಡಿವೆ.
ಇದರಿಂದಾಗಿ ಹೋಟೆಲ್‌ಗಳನ್ನು ಅವಲಂಬಿಸಿರುವ ವಿದ್ಯಾರ್ಥಿಗಳು, ಉದ್ಯೋಗಿಗಳು ಆಹಾರದ ಕೊರತೆ ಎದುರಿಸುತ್ತಿದ್ದಾರೆ. ಈ ಪರಿಸ್ಥಿತಿಯ ನಡುವೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ನಾಗರಿಕರಿಗೆ ಬುಕಿಂಗ್ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ಸಿಲಿಂಡರ್ಗಳನ್ನು ಮನೆಗಳಿಗೆ ವಿತರಿಸಲಾಗುವುದು. ಅಲ್ಲದೆ, ಎಲ್‌ಪಿಜಿ ಸಿಲಿಂಡರ್ ಉತ್ಪಾದನೆಯನ್ನು ಶೇಕಡಾ 25ರಷ್ಟು ಹೆಚ್ಚಿಸಲಾಗಿದೆ ಮತ್ತು ಹೊಸ ಮೂಲಗಳಿಂದ ಎಲ್‌ಎನ್‌ಜಿ ಸರಕುಗಳನ್ನು ಖರೀದಿಸಲಾಗುತ್ತಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
For More Updates Join our WhatsApp Group :



