ರಾಜ್ಯದಲ್ಲಿ ಅತಿ ಸುರಕ್ಷಿತ ನೋಂದಣಿ ಫಲಕ ಎಚ್‌ಎಸ್‌ಆರ್‌ಪಿ ಅಳವಡಿಕೆ ವಿಚಾರದಲ್ಲಿ ಯಾವುದೇ ಬಲವಂತದ ಕ್ರಮ ಹಾಗೂ ನಿರ್ಧಾರವನ್ನು ಜುಲೈ 4ರವರೆಗೆ ಜರುಗಿಸಬಾರದು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.ಜತೆಗೆ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ನಿಗದಿಪಡಿಸಿರುವ ಗಡುವು ವಿಸ್ತರಿಸಲು ಕೂಡ ಅನುಮತಿ ನೀಡಿದೆ.
ಮುಖ್ಯ ನ್ಯಾ. ಎನ್‌ವಿ ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದ್ದು, ಸರ್ಕಾರ ಆಗಸ್ಟ್ ಅಥವಾ ಸೆಪ್ಟಂಬರ್‌ವರೆಗೆ ಗಡುವು ವಿಸ್ತರಿಸಲು ನಿರ್ಧರಿಸಿದೆ ಎಂದು ಹೆಚ್ಚುವರಿ ಅಡ್ವೋಕೇಟ್ ವಿಕ್ರಮ್ ಹುಯಿಲಗೋಳ ತಿಳಿಸಿದ್ದಾರೆ.