ಮೇಕೆದಾಟು ಯೋಜನೆ ಅನುಷ್ಠಾನದಿಂದ ಬೆಂಗಳೂರು ನೀರಿನ ಬವಣೆಗೆ ಮುಕ್ತಿ: ಹೆಚ್‌.ಡಿ ದೇವೇಗೌಡ

ಮೇಕೆದಾಟು ಯೋಜನೆ ಅನುಷ್ಠಾನದಿಂದ ಬೆಂಗಳೂರು ನೀರಿನ ಬವಣೆಗೆ ಮುಕ್ತಿ: ಹೆಚ್.ಡಿ ದೇವೇಗೌಡ

ನವದೆಹಲಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ (Bengalur Drinking Water) ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Devegowda) ಕಳವಳ ವ್ಯಕ್ತಪಡಿಸಿದರು.

ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ, ಭಾರತದ ಮಾಹಿತಿ ತಂತ್ರಜ್ಞಾನ ರಾಜಧಾನಿ ಆಗಿರುವ ಬೆಂಗಳೂರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಕೇಂದ್ರ ಸರ್ಕಾರದ (Central Government) ಗಮನ ಸೆಳೆದರು. ಬೆಂಗಳೂರಿನ ನೀರಿನ ಬವಣೆ ನೀಗಿಸಬೇಕಾದರೆ ಮೇಕೆದಾಟು ಯೋಜನೆಗೆ ಅನುಮತಿ ಸಿಗಬೇಕಿದೆ. ಎಲ್ಲಾ ರಾಜಕೀಯ ಬದಿಗಿಟ್ಟು ಈ ಯೋಜನೆಗೆ ಬೆಂಬಲ ಕೊಡಬೇಕಿದೆ ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಮೇಕೆದಾಟು ಯೋಜನೆಗಾಗಿ (Mekedatu Project) ಕೆಲಸ ಮಾಡಿವೆ. ಆದರೆ ಇಲ್ಲಿಯವರೆಗೂ ಯಶಸ್ಸು ಸಿಕ್ಕಿಲ್ಲ. ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ ಸರ್ಕಾರ ಆದಷ್ಟು ಬೇಗ ಒಪ್ಪಿಗೆ ನೀಡಬೇಕು ಎಂದು ಅವರು ಕೋರಿದರು

Leave a Reply

Your email address will not be published. Required fields are marked *