ಲಿವ್-ಇನ್ ಸಂಬಂಧದ ಬಗ್ಗೆ ಮಹತ್ವದ ತೀರ್ಪು: High Court ಸ್ಪಷ್ಟನೆ.

ಲಿವ್-ಇನ್ ಸಂಬಂಧದ ಬಗ್ಗೆ ಮಹತ್ವದ ತೀರ್ಪು: ಹೈಕೋರ್ಟ್ ಸ್ಪಷ್ಟನೆ.

ಮದುವೆಯಾದ ಪುರುಷ ಲಿವ್-ಇನ್ ಸಂಬಂಧ ಇಟ್ಟುಕೊಳ್ಳುವುದು ಅಪರಾಧವಲ್ಲ.

ಅಲಹಾಬಾದ್ : ವಿವಾಹಿತ ಪುರುಷ ಮಹಿಳೆಯೊಂದಿಗೆ ಲಿವ್-ಇನ್ ಸಂಬಂಧದಲ್ಲಿರುವುದು ಕಾನೂನಿನ ಅಡಿಯಲ್ಲಿ ಅಪರಾಧವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಆತನಿಗೆ ಮದುವೆಯಾಗಿದೆ ಎಂಬ ವಿಷಯ ತಿಳಿದಿದ್ದರೂ ಮಹಿಳೆ ಆತನೊಂದಿಗೆ ಲಿವ್-ಇನ್ ರಿಲೇಷನ್​ಶಿಪ್​ನಲ್ಲಿದ್ದರೆ ಅದು ತಪ್ಪಲ್ಲ ಎಂದು ಕೋರ್ಟ್ ಹೇಳಿದೆ. ಆ ಮಹಿಳೆಯ ಕುಟುಂಬದಿಂದಲೇ ಬೆದರಿಕೆ ಎದುರಿಸುತ್ತಿರುವ ಲಿವ್-ಇನ್ ದಂಪತಿಗೆ ರಕ್ಷಣೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಪ್ರಕರಣವನ್ನು ಆಲಿಸಿದ ನ್ಯಾಯಾಲಯ ವಿವಾಹಿತ ಪುರುಷನು ಪರಸ್ಪರ ಒಪ್ಪಿಗೆಯ ಮೂಲಕ ವಯಸ್ಕ ಮಹಿಳೆಯ ಜೊತೆ ಒಟ್ಟಿಗೆ ವಾಸಿಸುವುದು ಯಾವುದೇ ಅಪರಾಧವಲ್ಲ ಎಂದು ಹೇಳಿದೆ.

“ವಿವಾಹಿತ ಪುರುಷನು ಮಹಿಳೆಯ ಒಪ್ಪಿಗೆಯ ಮೂಲಕ ಲಿವ್-ಇನ್ ಸಂಬಂಧದಲ್ಲಿ ವಾಸಿಸುವುದು ಮೊಕದ್ದಮೆ ಹೂಡಬಹುದಾದ ಯಾವುದೇ ಅಪರಾಧವಲ್ಲ. ನೈತಿಕತೆ ಮತ್ತು ಕಾನೂನನ್ನು ದೂರವಿಡಬೇಕು. ಹಾಗಂತ ಕಾನೂನಿನಡಿ ಅದು ಅಪರಾಧವಲ್ಲ ಎಂಬ ಮಾತ್ರಕ್ಕೆ ಸಾಮಾಜಿಕವಾಗಿಯೂ ಅದು ಸರಿ ಎಂದು ಹೇಳಲಾಗದು” ಎಂದು ನ್ಯಾಯಪೀಠ ಹೇಳಿದೆ.

ನ್ಯಾಯಾಲಯವು ‘ನೈತಿಕತೆ’ ಮತ್ತು ಕಾನೂನನ್ನು ಬೇರ್ಪಡಿಸಿ ನೋಡಬೇಕೆಂದು ಹೇಳಿದೆ. ಲಿವ್-ಇನ್ ರಿಲೇಷನ್​​ಶಿಪ್​ನಲ್ಲಿರುವ ವಿವಾಹಿತ ವ್ಯಕ್ತಿ ಯಾವುದೇ ಅಪರಾಧವನ್ನು ಮಾಡಿಲ್ಲ. ವಯಸ್ಕ ಮಹಿಳೆಯೊಂದಿಗಿನ ಅವರ ಲಿವ್-ಇನ್ ಸಂಬಂಧವು ಸಮ್ಮತಿಯಂತೆ ಕಾಣುತ್ತದೆ ಎಂದು ಕೋರ್ಟ್ ಹೇಳಿದೆ.

ಈ ಹಿನ್ನೆಲೆಯಲ್ಲಿ ಅನಾಮಿಕಾ ಮತ್ತು ನೇತ್ರಪಾಲ್ ಅಲಹಾಬಾದ್ ಹೈಕೋರ್ಟ್‌ನಲ್ಲಿ ಆ ಪ್ರಕರಣವನ್ನು ಪ್ರಶ್ನಿಸಿ, ಅದನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದಿಂದ ರಕ್ಷಣೆ ಕೋರಿದ್ದರು. ನನಗೆ 18ಕ್ಕಿಂತ ಜಾಸ್ತಿ ವಯಸ್ಸಾಗಿದೆ. ನಮ್ಮ ಕುಟುಂಬದಿಂದ ಮರ್ಯಾದಾ ಹತ್ಯೆಯ ಭಯ ಎದುರಾಗಿದೆ. ಅವರಿಂದ ನಮಗೆ ರಕ್ಷಣೆ ಬೇಕೆಂದು ಅನಾಮಿಕಾ ಕೋರಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *