ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ.

ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ.

ಮೈಸೂರು ಸೇರಿದಂತೆ ಬೆಂಗಳೂರು, ಬೆಳಗಾವಿಯ ವಾಯು ಗುಣಮಟ್ಟದಲ್ಲಿ ಸುಧಾರಣೆ.

ಬೆಂಗಳೂರು: ಹಲವಾರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ ಕುಸಿತ ಕಂಡಿತ್ತು. ಆದರೆ ಇಂದು ಹಲವು ಭಾಗಗಳಲ್ಲಿ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದಂತಿದೆ. ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150ಕ್ಕಿಂತ ಕಡಿಮೆ ಇರುವುದು ಕಂಡು ಬಂದಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 140ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು. ಆದರೆ ಇಂದು ಉಡುಪಿ, ಮಂಗಳೂರು ಸೇರಿ ಹಲವೆಡೆ ಏರ್ ಕ್ವಾಲಿಟಿ 150ಕ್ಕಿಂತ ಕಡಿಮೆ ಇದೆ. ಆದರೆ ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ

ಬೆಂಗಳೂರು –140

  • ಮಂಗಳೂರು-130
  • ಮೈಸೂರು –117
  • ಬೆಳಗಾವಿ – 78
  • ಕಲಬುರ್ಗಿ-104
  • ಶಿವಮೊಗ್ಗ – 138
  • ಬಳ್ಳಾರಿ – 156
  • ಹುಬ್ಬಳ್ಳಿ- 108
  • ಉಡುಪಿ –120
  • ವಿಜಯಪುರ –99

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *