ಬೆಂಗಳೂರು ಸೇರಿ ಉಡುಪಿ, ಮಂಗಳೂರು ನಗರಗಳಲ್ಲಿ ಏರ್ ಕ್ವಾಲಿಟಿ ಏರಿಕೆ – ಆದರೂ ಎಚ್ಚರಿಕೆ ಅಗತ್ಯ
ಬೆಂಗಳೂರು: ಕಳೆದ ಹಲವು ದಿನಗಳಿಂದ ಬೆಂಗಳೂರು ಸೆರಿದಂತೆ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ ಸುಧಾರಿಸುತ್ತಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.
ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 97ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
- ಬೆಂಗಳೂರು – 97
- ಮಂಗಳೂರು-87
- ಮೈಸೂರು –100
- ಬೆಳಗಾವಿ – 130
- ಕಲಬುರ್ಗಿ-88
- ಶಿವಮೊಗ್ಗ – 94
- ಬಳ್ಳಾರಿ – 91
- ಹುಬ್ಬಳ್ಳಿ- 112
- ಉಡುಪಿ –85
- ವಿಜಯಪುರ –86
ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?
- ಉತ್ತಮ- 0-50
- ಮಧ್ಯಮ – 50-100
- ಕಳಪೆ – 100-150
- ಅನಾರೋಗ್ಯಕರ – 150-200
- ಗಂಭೀರ – 200 – 300
- ಅಪಾಯಕಾರಿ – 300 -500+
For More Updates Join our WhatsApp Group :




