ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ಸಿದ್ದರಾಮಯ್ಯ ಸಮ್ಮುಖದಲ್ಲೇ ಸ್ವಾಮೀಜಿ ಬೇಡಿಕೆ

ಬೆಂಗಳೂರು: ಕೆಂಪೇಗೌಡ ಜಯಂತಿ ಆಚರಣೆಯ ವೇದಿಕೆಯಲ್ಲಿ ಚಂದ್ರಶೇಖರ್ ಸ್ವಾಮೀಜಿ ಮಾತನಾಡುತ್ತಾ, ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ಸಿದ್ದರಾಮಯ್ಯನವರಲ್ಲಿ ಬೇಡಿಕೆ ಇಟ್ಟಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮದಲ್ಲಿ ಮೈಸೂರು ರಸ್ತೆಯ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಇಂಥದ್ದೊಂದು ಬೇಡಿಕೆ ಇಟ್ಟರು.

“ಸಿದ್ದರಾಮಯ್ಯನವರು ಈಗಾಗಲೇ ಮುಖ್ಯಮಂತ್ರಿ ಸ್ಥಾನ ಅನುಭವಿಸಿದ್ದೀರಿ. ಇನ್ನುಳಿದ ಅವಧಿಯನ್ನು ಡಿ.ಕೆ.ಶಿವಕುಮಾರ್‌ಗೆ ಬಿಟ್ಟುಕೊಡಬೇಕು” ಎಂದು ಮನವಿ ಮಾಡಿದರು.

ಈ ಬೆಳವಣಿಗೆಯ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ವಿಕ್ಟರಿ ಚಿಹ್ನೆ ತೋರಿಸಿ ಪ್ರತಿಕ್ರಿಯಿಸಿದ್ದು ವಿಶೇಷವಾಗಿತ್ತು.

ರಾಜ್ಯದಲ್ಲಿ ಅಧಿಕಾರ ಹಸ್ತಾಂತರದ ಮಾತುಗಳು ಆಗಾಗ್ಗೆ ಕೇಳಿ ಬರುತ್ತಿವೆ. ಈ ಮಧ್ಯೆ ಇದೀಗ ಸ್ವಾಮೀಜಿ ಬಹಿರಂಗ ವೇದಿಕೆಯಲ್ಲಿ ಸಿಎಂ ಸ್ಥಾನದ ಬಗ್ಗೆ ಮಾತನಾಡಿ ಅಚ್ಚರಿ ಮೂಡಿಸಿದ್ದಾರೆ. ಹೆಚ್ಚುವರಿಯಾಗಿ ಮೂರು ಡಿಸಿಎಂ ಹುದ್ದೆ ಸೃಷ್ಟಿಗೆ ಕೆಲವು ಸಚಿವರು ಒತ್ತಡ ಹೇರುತ್ತಿರುವ ಮಧ್ಯೆ, ಚಂದ್ರಶೇಖರ್ ಸ್ವಾಮೀಜಿ ಸಿಎಂ ಸ್ಥಾನವನ್ನು ಡಿ.ಕೆ.ಶಿಗೆ ಬಿಟ್ಟು ಕೊಡುವಂತೆ ಸಿದ್ದರಾಮಯ್ಯರ ಸಮ್ಮುಖದಲ್ಲೇ ಹೇಳಿರುವುದು ವೇದಿಕೆ ಮೇಲಿದ್ದ ಸಚಿವರನ್ನೂ ಅಚ್ಚರಿಪಡಿಸಿತು

“ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ.ಶಿವಕುಮಾ‌ರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ” ಎಂದು ಸ್ವಾಮೀಜಿ ಮನವಿ ಮಾಡಿದ್ದಾರೆ

Leave a Reply

Your email address will not be published. Required fields are marked *