ಕಾಂಗ್ರೆಸ್ ರಾಜಕಾರಣದಲ್ಲಿ ಕಾವು.

ಕಾಂಗ್ರೆಸ್ ರಾಜಕಾರಣದಲ್ಲಿ ಕಾವು.

ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ’ – ಬಸವರಾಜ ಶಿವಗಂಗಾ ಸ್ಫೋಟಕ ಹೇಳಿಕೆ

ದಾವಣಗೆರೆ : ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ನಾಯಕತ್ವ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿರುವ ಮಧ್ಯೆ, ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಅಧಿಕಾರ ಹಂಚಿಕೆ ಕುರಿತ ಒಪ್ಪಂದ ಈಗಾಗಲೇ ಆಗಿದೆ ಎಂಬ ಮಾಹಿತಿ ನನಗೆ ಇದೆ ಎಂದು ಅವರು ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್‌ನ ಎಲ್ಲ 139 ಬಹುತೇಕ ಶಾಸಕರ ಬೆಂಬಲವಿದೆ. ಇದಕ್ಕೂ ಮೀರಿ ನಮ್ಮಂತಹ 40-50 ಯುವ ಶಾಸಕರು ಡಿಕೆಶಿ ಏನೇ ಹೇಳಿದರೂ ಮಾಡಲು ಸಿದ್ಧರಾಗಿದ್ದೇವೆ. ಅಗತ್ಯವಿದ್ದರೆ ಪ್ರಾಣ ಕೊಡಲೂ ಸಿದ್ಧವೆಂದು ಹೇಳಿದರು.

ಅಧಿಕಾರ ಹಂಚಿಕೆ ಕುರಿತು ಒಪ್ಪಂದ ಆಗಿರುವ ಬಗ್ಗೆ ನನಗೆ ಸ್ಪಷ್ಟ ಮಾಹಿತಿ ಇದೆ. ಈ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದರು. ಯತೀಂದ್ರ ಸಿದ್ದರಾಮಯ್ಯ ಪದೇಪದೇ ನಾಯಕತ್ವ ವಿಚಾರವಾಗಿ ಹೇಳಿಕೆ ನೀಡುತ್ತಿರುವುದು ಪಕ್ಷದ ಒಳಚರ್ಚೆಗೆ ಕಾರಣವಾಗಿದೆ. ಯತೀಂದ್ರ ಹೇಳಿಕೆ ಬಗ್ಗೆ ಪಕ್ಷದ ಹೈಕಮಾಂಡ್‌ವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *