ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಅನಿರ್ಧಿಷ್ಟಾವಧಿ ಮುಷ್ಕರ.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಅನಿರ್ಧಿಷ್ಟಾವಧಿ ಮುಷ್ಕರ.

ದೇವನಹಳ್ಳಿ: ದೇವನಹಳ್ಳಿ ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಅನಿರ್ಧಿಷ್ಟಾವಧಿ ಮುಷ್ಕರ ಮಾಡಿದರು.

ತಾಲ್ಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿನ ಅಂಬೇಡ್ಕರ್ ಪ್ರತಿಮೆ ಮುಂಭಾಗ ಕುಳಿತು ಸರ್ಕಾರ ಹಲವು ಮೂಲಸೌಕರ್ಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಿದರು. ಇದಕ್ಕೆ ಕಂದಾಯ ಇಲಾಖಾ ನೌಕರರ ಸಂಘ ಸಾಥ್ ನೀಡಿದೆ.

ಗ್ರಾಮ ಆಡಳಿತ ಅಧಿಕಾರಿಗಳ ತಾಲ್ಲೂಕು ಉಪಾಧ್ಯಕ್ಷೆ  ಶೈಲಜಾ ಮಾತನಾಡಿ, ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಸುಮಾರು 17ಕ್ಕೂ ಅಧಿಕ ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್ ಸಾಧನ, ಹಾಗೂ ಲ್ಯಾಪ್ ಟಾಪ್ ಹಾಗೂ ಅದಕ್ಕೆ ಅವಶ್ಯಕವಾಗಿರುವ ಇಂಟರ್ ನೆಟ್ ಹಾಗೂ ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ಕ್ಷೇತ್ರ ಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳ ಸಾವು ನೋವುಗಳು ಆಗುತ್ತಿದ್ದು, ನಿರಂತರವಾಗಿ ಮಾರಣಾಂತಿಕ ಹಲ್ಲೆ ನಡೆಯುತ್ತಿರುತ್ತದೆ. ಎಲ್ಲಾ ಮೊಬೈಲ್ ಆಪ್ ಗಳಲ್ಲಿ ಏಕಕಾಲದಲ್ಲಿ ಪ್ರಗತಿ ಸಾಧಿಸಲು ತೀವ್ರ ಒತ್ತಡ ಹೇರುತ್ತಿರುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮ ಗಳು ಹೆಚ್ಚಾಗಿರುತ್ತದೆ. ಭಾನುವಾರ ರಜಾ ದಿನದಲ್ಲು ಕರ್ತವ್ಯ ನಿರ್ವಹಿಸಲು ಒತ್ತಡ ಹಾಕಬಾರದು ಕುಟುಂಬದೊಂದಿಗೆ ಇರಲು ಅವಕಾಶ ನೀಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರು ಕೆಲಸವನ್ನು ಮೊಟಕುಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸಾಥ್ ನೀಡಿದರು.

Leave a Reply

Your email address will not be published. Required fields are marked *