ಭಾರತ: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ 7 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.
ಚಂಡಮಾರುತದ ಪರಿಚಲನೆ ಪರಿಣಾಮ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.
ಮುಂದಿನ 7 ದಿನಗಳ ಕಾಲ ಕರ್ನಾಟಕ, ಕರಾವಳಿ ಆಂಧ್ರಪ್ರದೇಶದ ಯಾನಂ, ತೆಲಂಗಾಣದ ರಾಯಲಸೀಮಾ, ಕೇರಳದ ಮಾಹೆ, ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್ನಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಏಪ್ರಿಲ್ 26 ರಂದು ಅಂದರೆ ಇಂದು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಗಂಟೆಗೆ 50-60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಅಲ್ಲದೆ, 26 ಮತ್ತು 27ರಂದು ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ, ಏಪ್ರಿಲ್ 28 ಮತ್ತು 29ರಂದು ನಾಗಾಲ್ಯಾಂಡ್, ಮಿಜೋರಾಂ ಮತ್ತು ತ್ರಿಪುರ, ಏಪ್ರಿಲ್ 28 ಮತ್ತು 29ರಂದು ಕೇರಳ ಮತ್ತು ಮಾಹೆಯಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಏಪ್ರಿಲ್ 26ರಂದು ಕರ್ನಾಟಕದ ಉತ್ತರ ಒಳನಾಡಿನಲ್ಲಿ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, 28ರ ವರೆಗೆ ಛತ್ತೀಸ್ಗಢದ, ಏಪ್ರಿಲ್ 27ರಂದು ಬಿಹಾರ, ಜಾರ್ಖಂಡ್, ಏಪ್ರಿಲ್ 27 ಮತ್ತು 28 ರಂದು ಒಡಿಶಾದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಏಪ್ರಿಲ್ 26ರಂದು ಪಶ್ಚಿಮ ಹಿಮಾಲಯ ಪ್ರದೇಶದಲದಲಿ ಭಾರೀ ಮಳೆ ಜೊತೆಗೆ ಗಂಟೆಗೆ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಈ ಭಾಗದ ಜನರಿಗೆ ಕಿಟಕಿಗಳು ಮತ್ತು ಬಾಗಿಲುಗಳನ್ನು ಭದ್ರವಾಗಿ ಮುಚ್ಚಿ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ ಅಂತಲೂ ಸೂಚನೆ ನೀಡಲಾಗಿದೆ.