ಧೂಮಪಾನಿಗಳ ಸಂಖ್ಯೆಯಲ್ಲಿ ಭಾರತ ವಿಶ್ವದಲ್ಲೇ ನಂಬರ್ 2

ನವದೆಹಲಿ: ಕ್ಯಾನ್ಸರ್‌ಗೆ ಕಾರಣವಾಗುವ ಗುಟ್ಕಾ ಮತ್ತು ತಂಬಾಕು ಬಳಕೆ ಮೇಲಿನ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಭಾರತದಲ್ಲಿ 16ರಿಂದ 64ರ ವಯೋಮಾನ ಒಟ್ಟಾರೆ 25 ಕೋಟಿಗಿಂತ ಹೆಚ್ಚು ಮಂದಿ ಧೂಮಪಾನದ ದಾಸರಾಗಿದ್ದಾರೆ.

ಅತಿ ಹೆಚ್ಚು ಧೂಮಪಾನಿಗಳನ್ನು ಹೊಂದಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 2ನೇ ಸ್ಥಾನ ಪಡೆದಿದೆ ಎಂದು ವರದಿಯೊಂದು ತಿಳಿಸಿದೆ. ಅಲ್ಲದೆ ದುಮಪಾನ ತ್ಯಜಿಸುವವರ ಸಂಖ್ಯೆ ಭಾರತದಲ್ಲಿ ವಿರಳವಾಗಿದೆ ಎಂದು ವರದಿಯೊಂದಿಗೆ ತಿಳಿಸಿದೆ. ದಿ ಇಂಟರ್‌ನ್ಯಾಷನಲ್‌ ಕಮಿಷನ್‌ ಟು ರೀಗ್ನೈಟ್‌ ದಿ ಫೈಟ್‌ ಅಗೇನ್ಸ್ಟ್‌ ಸ್ಮೋಕಿಂಗ್ ಎಂಬ ಸಂಸ್ಥೆ ಈ ವರದಿ ಬಿಡುಗಡೆ ಮಾಡಿದೆ.

ಈ ಪ್ರಕಾರ ಭಾರತ ಮತ್ತು ಚೀನಾದಲ್ಲಿ 16ರಿಂದ 64 ವರ್ಷದೊಳಗಿನ 50 ಕೋಟಿಗಿಂತ ಹೆಚ್ಚು ಮಂದಿ ತಂಬಾಕು ವ್ಯಸನಿಗಳನ್ನು ಒಳಗೊಂಡಿರುವ ಚೀನಾ, ವಿಶ್ವಾದ್ಯಂತ ವರ್ಷಕ್ಕೆ 8 ಲಕ್ಷ ಮಂದಿಯ ಸಾವು ಮತ್ತು 20 ಕೋಟಿ ಜನರ ಅಂಗವಿಕಲತೆಗೆ ಕಾರಣವಾಗುವ ತಂಬಾಕಿಗೆ ಈಗಲೂ 114 ಕೋಟಿ ಮಂದಿ ದಾಸರಾಗಿದ್ದಾರೆ ಎಂಬ ಕಳವಳಕಾರಿ ಅಂಶವನ್ನು ಈ ವರದಿಯಲ್ಲಿ ತಿಳಿಸಲಾಗಿದೆ

Pragati TV Social Connect for more latest u

Leave a Reply

Your email address will not be published. Required fields are marked *