USA ನಲ್ಲಿ ಇತಿಹಾಸ ಬರೆದ ಭಾರತೀಯ || ಅಮೆರಿಕದ ವರ್ಜೀನಿಯಾದ ಕಾಂಗ್ರೆಷನಲ್ ಡಿಸ್ಟಿಕ್ಸ್ಗೆ ಸುಹಾಸ್ ಸುಬ್ರಹ್ಮಣ್ಯಂ ಆಯ್ಕೆ

USA ನಲ್ಲಿ ಇತಿಹಾಸ ಬರೆದ ಭಾರತೀಯ || ಅಮೆರಿಕದ ವರ್ಜೀನಿಯಾದ ಕಾಂಗ್ರೆಷನಲ್ ಡಿಸ್ಟಿಕ್ಸ್ಗೆ ಸುಹಾಸ್ ಸುಬ್ರಹ್ಮಣ್ಯಂ ಆಯ್ಕೆ

ವಾಷಿಂಗ್ಟನ್: ಭಾರತ ಮೂಲದ ಸುಹಾಸ್ ಸುಬ್ರಹ್ಮಣ್ಯಂ ಅವರು ಅಮೆರಿಕದ ವರ್ಜೀನಿಯಾದ ೧೦ನೇ ಕಾಂಗ್ರೆಷನಲ್ ಡಿಸ್ಟಿಕ್ಸ್ ಆಯ್ಕೆಯಾಗುವ ಮೂಲಕ ಇತಿಹಾಸ ಬರೆದಿದ್ದಾರೆ. ಪೂರ್ವ ಕರಾವಳಿಯಿಂದ ಚುನಾಯಿತರಾದ ಮೊದಲ ಭಾರತೀಯ ಅಮೆರಿಕನ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಡೆಮಾಕ್ರಟಿಕ್ ಭದ್ರಕೋಟೆಯಾದ ವರ್ಜೀನಿಯಾದಿಂದ ಜನಪ್ರತಿನಿಧಿಗಳ ಸಭೆಗೆ (ಕಾಂಗ್ರೆಸ್) ಸ್ಪರ್ಧಿಸಿದ್ದ ಸುಬ್ರಮಣ್ಯಂ ಅವರು ರಿಪಬ್ಲಿಕನ್ ಪಕ್ಷದ ಮೈಕ್ ಕ್ಲಾನ್ಸಿ ಅವರನ್ನು ಸೋಲಿಸಿದ್ದಾರೆ.

‘ಕಾಂಗ್ರೆಸ್‌ನಲ್ಲಿ ಕಠಿಣ ಹೋರಾಟಗಳನ್ನು ನಡೆಸಲು ಮತ್ತು ಜನರ ಪರವಾಗಿ ಫಲಿತಾಂಶಗಳನ್ನು ನೀಡಲು ನನ್ನ ಮೇಲೆ ನಂಬಿಕೆ ಇಟ್ಟು ಮತ ಹಾಕಿದ ವರ್ಜೀನಿಯಾದ ೧೦ನೇ ಕಾಂಗ್ರೆಷನಲ್ ಡಿಸ್ಟಿಕ್ಸ್ ಜನರಿಗೆ ಆಭಾರಿಯಾಗಿದ್ದೇನೆ. ಈ ಕ್ಷೇತ್ರ ನನ್ನ ಮನೆ. ನಾನು ಇಲ್ಲಿಯೇ ಮದುವೆಯಾಗಿದ್ದೇನೆ. ನನ್ನ ಹೆಂಡತಿ ಮಿರಾಂಡಾ ಮತ್ತು ನಾನು ಇಲ್ಲಿಯೇ ನಮ್ಮ ಹೆಣ್ಣುಮಕ್ಕಳನ್ನು ಬೆಳೆಸುತ್ತಿದ್ದೇವೆ. ಇಲ್ಲಿನ ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆಗಳು ನಮ್ಮ ಕುಟುಂಬಕ್ಕೆ ವೈಯಕ್ತಿಕವಾದವುಗಳು. ಈ ಜಿಲ್ಲೆಗೆ ಸೇವೆ ಸಲ್ಲಿಸಲು ನನಗೆ ಸಿಕ್ಕ ಸದಾವಕಾಶ ಇದಾಗಿದೆ’ ಎಂದು ಸುಬ್ರಹ್ಮಣ್ಯಂ ಹೇಳಿದ್ದಾರೆ.

Leave a Reply

Your email address will not be published. Required fields are marked *