5 ಮತ್ತು 6ನೇ ಘಟಕಗಳಿಗೆ ಮೇಕ್ ಇನ್ ಇಂಡಿಯಾ ತಂತ್ರಜ್ಞಾನ.
ಬೆಂಗಳೂರು: ರಕ್ಷಣಾ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿದ್ದ ಮೇಕ್ ಇನ್ ಇಂಡಿಯಾ ಯೋಜನೆ ಈಗ ಅಣುಶಕ್ತಿ ಕ್ಷೇತ್ರಕ್ಕೂ ಕಾಲಿಟ್ಟಿದೆ. ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಯೋಜನೆಯ 5 ಮತ್ತು 6ನೇ ಘಟಕಗಳ ನಿರ್ಮಾಣ ಕಾಮಗಾರಿಗೆ ಅಧಿಕೃತ ಚಾಲನೆ ನೀಡಲಾಗಿದ್ದು, ಈ ಘಟಕಗಳಲ್ಲಿ ಸ್ಥಾಪನೆಯಾಗುವ ರಿಯಾಕ್ಟರ್‌ಗಳು ಸಂಪೂರ್ಣ ಸ್ವದೇಶಿ ತಂತ್ರಜ್ಞಾನದಿಂದ ನಿರ್ಮಿತವಾಗಿವೆ ಎನ್ನುವುದು ವಿಶೇಷ.
ಈ ಬಗ್ಗೆ ಮಾಹಿತಿ ನೀಡಿರುವ ಕೈಗಾ ಘಟಕದ ಸೈಟ್ ನಿರ್ದೇಶಕ ಬಿ. ವಿನೋದ್ ಕುಮಾರ್ , 700 ಮೆಗಾವಾಟ್ ಸಾಮರ್ಥ್ಯದ ಪ್ರೆಷರೈಸ್ಡ್ ಹೆವಿ ವಾಟರ್ ರಿಯಾಕ್ಟರ್‌ಗಳನ್ನು ಮೇಕ್ ಇನ್ ಇಂಡಿಯಾ ಯೋಜನೆಯಡಿ ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗಿದೆ. ಕೇಂದ್ರ ಸರ್ಕಾರವು ಫ್ಲೀಟ್ ಮೋಡ್‌ನಲ್ಲಿ 10 ಅಣು ವಿದ್ಯುತ್ ಯೋಜನೆಗಳಿಗೆ ಅನುಮೋದನೆ ನೀಡಿದ್ದು, 700 ಮೆಗಾವಾಟ್ ರಿಯಾಕ್ಟರ್‌ಗಳನ್ನು ಗುಜರಾತ್, ರಾಜಸ್ಥಾನ ಹಾಗೂ ಕರ್ನಾಟಕ ರಾಜ್ಯಗಳಿಗೆಂದು ಅಭಿವೃದ್ಧಿಪಡಿಸಲಾಗಿದೆ. ಆ ಮೂಲಕ ಮೊದಲ ಬಾರಿಗೆ ಸ್ವದೇಶೀ ರಿಯಾಕ್ಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಹಳೆಯ ಒಪ್ಪಂದದ ಪ್ರಕಾರ ರಾಜ್ಯಕ್ಕೆ ಉತ್ಪಾದಿತ ವಿದ್ಯುತ್‌ನ ಶೇ.20ರಷ್ಟು ಪಾಲು ಸಿಗುತ್ತಿತ್ತು. ಆದರೆ ಹೊಸ ಯೋಜನೆಯಡಿ ರಾಜ್ಯಕ್ಕೆ ಶೇ.50ರಷ್ಟು ಪಾಲು ದೊರೆಯಲಿದೆ ಎಂದು ತಿಳಿಸಿದ್ದಾರೆ.
For More Updates Join our WhatsApp Group :




