ಬಾಲಿವುಡ್‌ಗೆ ಇಂದ್ರಜಿತ್ ಲಂಕೇಶ್ ಎಂಟ್ರಿ.

ಬಾಲಿವುಡ್‌ಗೆ ಇಂದ್ರಜಿತ್ ಲಂಕೇಶ್ ಎಂಟ್ರಿ.

‘ಜೈ ಹಿಂದ್ ಜೈ ಸಿಂಧ್’ ಚಿತ್ರದ ಮೂಲಕ ಹಿಂದಿ ಚಿತ್ರರಂಗಕ್ಕೆ ಪಾದಾರ್ಪಣೆ.

‘ಐಶ್ವರ್ಯಾ’, ‘ಮೊನಾಲಿಸಾ’, ‘ಲಂಕೇಶ್ ಪತ್ರಿಕೆ’ ಮುಂತಾದ ಸಿನಿಮಾಗಳ ಅನುಭವಿ ನಿರ್ದೇಶಕ ಇಂದ್ರಜಿತ್ ಲಂಕೇಶ್  ಅವರು ಈಗ ಹಿಂದಿ ಚಿತ್ರರಂಗದತ್ತ ಮುಖ ಮಾಡಿದ್ದಾರೆ. ಹೌದು, ಅವರೊಂದು ಬಾಲಿವುಡ್ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾಗೆ ‘ಜೈ ಹಿಂದ್ ಜೈ ಸಿಂಧ್’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ಸದ್ದಿಲ್ಲದೆ ಚಿತ್ರೀಕರಣ ಮಾಡಲಾಗಿದೆ. ಇಂದ್ರಜಿತ್ ಲಂಕೇಶ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಉತ್ತರಾಖಂಡದಲ್ಲಿ ಚಿತ್ರಕ್ಕೆ ಕೊನೆಯ ಹಂತದ ಶೂಟಿಂಗ್ ಮಾಡಲಾಗುತ್ತಿದೆ. ಇತ್ತೀಚೆಗೆ ಸುದ್ದಿಗೋಷ್ಠಿ ಮಾಡಲಾಯಿತು.

ಡೆಹ್ರಾಡೂನ್​ನಲ್ಲಿ ‘ಜೈ ಹಿಂದ್ ಜೈ ಸಿಂಧ್’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ನಡೆಯಿತು. ಮೊದಲ ಸುದ್ದಿಗೋಷ್ಠಿ ಅದ್ದೂರಿಯಾಗಿ ಮಾಡಲಾಯಿತು. ಸುದ್ದಿಗೋಷ್ಠಿಯಲ್ಲಿ ಇಂದ್ರಜಿತ್ ಜೊತೆಗೆ ನಿರ್ಮಾಪಕ ಸ್ಯಾಮಿ ನನ್ವಾನಿ, ಆಕಾಶ ವತ್ಸ್, ವಿಕ್ರಂ ಕೊಚ್ಚರ್ ಮುಂತಾದವರು ಭಾಗಿಯಾಗಿದ್ದರು. ಸಿನಿಮಾದ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು.

ಸ್ಯಾಮೀಸ್ ಎಂಟರ್ಟೈನ್ಮೆಂಟ್ ಸಂಸ್ಥೆಯ ಮೂಲಕ ಸ್ಯಾಮಿ ನನ್ವಾನಿ ಅವರು ‘ಜೈ ಹಿಂದ್ ಜೈ ಸಿಂಧ್’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮಹೇಶ್ ಮಂಜ್ರೇಕರ್, ವಿಕ್ರಂ ಕೋಚಾರ್, ಜರೀನಾ ವಹಾಬ್, ಜಯಪ್ರದಾ, ಅಮಿತ್ ಬಹಲ್, ಉಪಾಸನಾ ಸಿಂಗ್ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ. ಈ ಸಿನಿಮಾದ ಮೂಲಕ ನಾಲ್ವರು ಹೊಸ ಪ್ರತಿಭೆಗಳನ್ನು ಇಂದ್ರಜಿತ್ ಲಂಕೇಶ್ ಅವರು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *