ಕೊ* ಕೇಸ್ ಮುಚ್ಚಿಹಾಕಲು ಇನ್ಸ್ಪೆಕ್ಟರ್ ಪ್ಲಾನ್? ವರ್ತೂರು ಠಾಣೆ ವಿರುದ್ಧ ಗಂಭೀರ ಆರೋಪ.

ಕೊ* ಕೇಸ್ ಮುಚ್ಚಿಹಾಕಲು ಇನ್ಸ್ಪೆಕ್ಟರ್ ಪ್ಲಾನ್? ವರ್ತೂರು ಠಾಣೆ ವಿರುದ್ಧ ಗಂಭೀರ ಆರೋಪ.

ರೌಡಿಶೀಟರ್ ಜೊತೆ ಸಖ್ಯ: ಚಾರ್ಜ್‌ಶೀಟ್ ವಿಳಂಬ, ಆರೋಪಿಗಳಿಗೆ ಸುಲಭ ಜಾಮೀನು

ಬೆಂಗಳೂರು : ನಗರದ ವರ್ತೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಯೋಗಾನಂದ್ ಅವರು ರೌಡಿಶೀಟರ್‌ಗಳೊಂದಿಗೆ ಕೈಜೋಡಿಸಿ, ಕೊಲೆ ಪ್ರಕರಣವೊಂದನ್ನು ಹಳ್ಳ ಹಿಡಿಸುತ್ತಿದ್ದಾರೆ ಎಂಬ ಆತಂಕಕಾರಿ ಆರೋಪ ಕೇಳಿಬಂದಿದೆ. ಎಲ್ ಎಲ್ ಬಿ ವಿದ್ಯಾರ್ಥಿ ರೇವಂತ್ ಕೊಲೆ ಪ್ರಕರಣದ ತನಿಖೆಯಲ್ಲಿ ಉದ್ದೇಶಪೂರ್ವಕ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಸಂತ್ರಸ್ತ ಕುಟುಂಬ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. 2024ರ ಸೆಪ್ಟೆಂಬರ್ 18ರಂದು ತಮಿಳುನಾಡಿನ ಬಾಗಲೂರಿನಲ್ಲಿ 24 ವರ್ಷದ ಎಲ್ ಎಲ್ ಬಿ ವಿದ್ಯಾರ್ಥಿ ರೇವಂತ್‌ನನ್ನು ರೌಡಿಶೀಟರ್ ರೇವಾ ಮತ್ತು ಗ್ಯಾಂಗ್ ಭೀಕರವಾಗಿ ಹತ್ಯೆ ಮಾಡಿತ್ತು.

ರೇವಂತ್ ತನ್ನ ಸ್ನೇಹಿತ ಸ್ಟಾಲಿನ್ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಿಸಲು ಸಹಕರಿಸಿದ್ದ. ಈ ಕೇಸ್ ವಾಪಸ್ ಪಡೆಯುವಂತೆ ರೇವಾ ಗ್ಯಾಂಗ್ ರೇವಂತ್ ಮೇಲೆ ಒತ್ತಡ ಹೇರಿತ್ತು. ರಾಜಿ ಮಾಡಿಕೊಳ್ಳೋಣ ಎಂದು ನಂಬಿಸಿ ಕರೆಸಿಕೊಂಡ ದುಷ್ಕರ್ಮಿಗಳು, ರೇವಂತ್‌ನ ಚಿಕ್ಕಪ್ಪನ ಕಣ್ಣೆದುರೇ ಆತನನ್ನು ಕೊಚ್ಚಿ ಕೊಂದಿದ್ದರು.

ತಮಿಳುನಾಡು ಪೊಲೀಸರಿಂದ ವರ್ಗಾವಣೆಯಾದ ಈ ಪ್ರಕರಣದ ತನಿಖೆ ನಡೆಸಿದ ವರ್ತೂರು ಪೊಲೀಸರು, ನಿಯಮದಂತೆ 90 ದಿನಗಳೊಳಗೆ ಚಾರ್ಜ್‌ಶೀಟ್ ಸಲ್ಲಿಸಿಲ್ಲ. ಜೈಲಿನಲ್ಲಿದ್ದ ರೌಡಿಶೀಟರ್ ರೇವಾ ಸೇರಿದಂತೆ ಏಳು ಮಂದಿ ಆರೋಪಿಗಳು ಸುಲಭವಾಗಿ ಜಾಮೀನು ಪಡೆದು ಹೊರಬಂದಿದ್ದಾರೆ. ಜಾಮೀನಿನ ಮೇಲೆ ಹೊರಬಂದ ರೌಡಿಶೀಟರ್ ರೇವಾಗೆ ಪ್ರತಿದಿನ ಠಾಣೆಗೆ ಬಂದು ಸಹಿ ಹಾಕುವಂತೆ ನ್ಯಾಯಾಲಯ ಆದೇಶಿಸಿತ್ತು. ಆದರೆ, ಇನ್ಸ್‌ಪೆಕ್ಟರ್ ಯೋಗಾನಂದ್ ಪ್ರಭಾವದಿಂದ ರೇವಾ ಠಾಣೆಗೆ ಬರುತ್ತಿಲ್ಲ. ಬದಲಾಗಿ, ಪೊಲೀಸರೇ ರೇವಾನ ಅಪಾರ್ಟ್‌ಮೆಂಟ್‌ಗೆ ಹೋಗಿ ಸಹಿ ಮಾಡಿಸಿಕೊಂಡು ಬರುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ..

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *