ತುಮಕೂರು: ಗೃಹ ಸಚಿವರ ಸ್ವಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಅಪಮಾನ ಮಾಡಿರುವ ಘಟನೆ ನಡೆದಿದೆ.
ವಾಲ್ಮೀಕಿ ಜಯಂತಿ ದಿನದಂದೇ ವಾಲ್ಮೀಕಿ ಗುರುಗಳ ಪುತ್ಥಳಿಯನ್ನು ಕಿಡಿಗೇಡಿಗಳು ಕದ್ದೊಯ್ದಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ಘಟನೆ ನಡೆದಿದೆ.
ಈ ಪ್ರಕರಣದ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಕೊರಟಗೆರೆ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯದ ನಾಯಕರು ಧರಣಿಗೆ ಕುಳಿತಿದ್ದಾರೆ.
ಮಹಿಳೆಯರು ಸೇರಿದಂತೆ ನೂರಾರು ವಾಲ್ಮೀಕಿ ಸಮುದಾಯದ ಜನರಿಂದ ಧರಣಿ ಮಾಡಲಾಗಿದೆ. ಕೊರಟಗೆರೆ ಪಟ್ಟಣದಲ್ಲಿ ತಡರಾತ್ರಿ ವಾಲ್ಮೀಕಿ ಸಮುದಾಯದ ನಾಯಕರು ಧರಣಿ ನಡೆಸಿದ್ದಾರೆ.
ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣ ಹಿನ್ನೆಲೆಯಲ್ಲಿ ಸ್ಥಳಕ್ಕೆ ತುಮಕೂರು ಎಸ್.ಪಿ ಅಶೋಕ್ ಕೆ.ವಿ, ಹಾಗೂ ಎಎಸ್ ಪಿ ಮರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉದ್ದೇಶ ಪೂರ್ವಕವಾಗಿ ಈ ಕೃತ್ಯ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿದ್ದು, ಕೂಡಲೇ ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿ ಧರಣಿ ನಡೆಸಿದ್ದಾರೆ.
ಕಿಡಿಗೇಡಿಗಳನ್ನ ಬಂಧಿಸುವವರೆಗೂ ಧರಣಿ ಕೈಬಿಡಲ್ಲ ಎಂದು ಪಟ್ಟು ಹಿಡಿದ ವಾಲ್ಮೀಕಿ ಸಮುದಾಯದ ನಾಯಕರು. ಹಾಗಾಗಿ ಕೂಡಲೇ ವಾಲ್ಮೀಕಿ ಪುತ್ಥಳಿ ಕದ್ದೊಯ್ದ ಕಿಡಿಗೇಡಿಗಳನ್ನ ಪತ್ತೆ ಹಚ್ಚುವುದಾಗಿ ತುಮಕೂರು ಎಸ್ ಪಿ ಅಶೋಕ್ ಕೆ.ವಿ. ಭರವಸೆ ಕೊಟ್ಟಿದ್ದಾರೆ.
ಧರಣಿ ಕೈ ಬಿಡುವಂತೆ ವಾಲ್ಮೀಕಿ ಸಮುದಾಯದ ನಾಯಕರಿಗೆ ಪೊಲೀಸರು ಮನವಿ ಮಾಡಿದ್ದಾರೆ.
ವಾಲ್ಮೀಕಿ ಸಮುದಾಯದ ನಾಯಕರನ್ನ ಮನವೊಲಿಸಲು ಪೊಲೀಸರು ಮುಂದಾಗಿದ್ದು,
ಧರಣಿ ಕೈಬಿಡದೆ ಪ್ರತಿಭಟನೆ ಮುಂದುವರೆಸಿದ್ದಾರೆ.
ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.