ರಾಜೀವ್ ಗೌಡ ಕಾನೂನಿಗೆ ಒಳಬರುಬೇಕು.
ಬೆಂಗಳೂರು : ಶಿಡ್ಲಘಟ್ಟ ಪೌರಾಯುಕ್ತೆಯನ್ನು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನ್ನು ಸಚಿವ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜೀವ್ ಗೌಡ ಅಥವಾ ಬೇರೆ ಯಾರೇ ಆಗಿರಲಿ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಬೇರೆಯವರನ್ನು ನಿಂದಿಸಲು ಅಥವಾ ಅವಾಚ್ಯ ಶಬ್ದಗಳನ್ನು ಬಳಸಲು ಯಾರಿಗೂ ಹಕ್ಕಿಲ್ಲ ಎಂದರು. ಅಲ್ಲದೆ, ಪಕ್ಷದ ಅಧ್ಯಕ್ಷರು ಅವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು.
ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬ ಬಿಜೆಪಿ ಟ್ವೀಟ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಿಂದ ಸಂಸ್ಕೃತಿ ಕಲಿಯಬೇಕಿಲ್ಲ. ಮುನಿರತ್ನ, ಸಿ.ಟಿ. ರವಿ ಯಾವ ರೀತಿ ಮಾತನಾಡಿದ್ದಾರೆ ಎಂಬುದನ್ನು ಜನ ನೋಡಿದ್ದಾರೆ ಎಂದು ಉಲ್ಲೇಖಿಸಿ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿಗೆ ಸಂಸ್ಕೃತಿ ಇಲ್ಲ ಎಂದು ಟೀಕಿಸಿದರು.
For More Updates Join our WhatsApp Group :




