ಬಿಜೆಪಿ ಅವಧಿಯಲ್ಲಿನ 21 ಹಗರಣಗಳ ಆರೋಪಗಳ ಬಗ್ಗೆ ವಿವಿಧ ಹಂತಗಳಲ್ಲಿ ತನಿಖೆ

ಬೆಂಗಳೂರು: ಬಿಜೆಪಿ ಅವಧಿಯ ಅಕ್ರಮ ಆರೋಪಗಳ ತನಿಖೆಗೆ ವೇಗ ನೀಡಲು ಸಿಎಂ ಸಿದ್ದರಾಮಯ್ಯ ಐವರು ಸಚಿವರ ಸಮಿತಿ ರಚಿಸಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದ ಈ ಸಮಿತಿಯಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಸಂತೋಷ್ ಲಾಡ್ ಇದ್ದಾರೆ.

ಸರ್ಕಾರದ ಹಾಗೂ ತನಿಖಾ ಸಂಸ್ಥೆಗಳ ಹಂತದಲ್ಲಿರುವ ವಿವಿಧ ಹಗರಣಗಳ ತನಿಖಾ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಈ ಸಮಿತಿ ಕ್ರಮವಹಿಸಲಿದೆ. ಮುಂದಿನ ಎರಡು ತಿಂಗಳಲ್ಲಿ ತಮಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಇದರೊಂದಿಗೆ ಮುಡಾ, ವಾಲ್ಮೀಕಿ ಅಭಿವೃದ್ಧಿ ಅಕ್ರಮ ಸಂಬಂಧ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಪ್ರತಿಪಕ್ಷ ಬಿಜೆಪಿಗೆ ಕೌಂಟರ್​ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

ಬಿಜೆಪಿ ಅವಧಿಯಲ್ಲಿನ 21 ಹಗರಣಗಳ ಆರೋಪಗಳ ಬಗ್ಗೆ ವಿವಿಧ ಹಂತಗಳಲ್ಲಿ ತನಿಖೆ ನಡೆಯುತ್ತಿದೆ.‌

Leave a Reply

Your email address will not be published. Required fields are marked *