ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಮಯ್ಯ ಸಂಬಂಧಿಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಪ್ರಕರಣದಲ್ಲಿ ಆರೋಪಿ.ನಂ.3 ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಆರೋಪಿ ನಂ.4 ಆಗಿರುವ ದೇವರಾಜು ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಗುರುವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ಲೋಕಾಯುಕ್ತ ಕಚೇರಿಯ ಮೂಲಗಳಉ ಮಾಹಿತಿ ನೀಡಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಎಫ್‌ಐಆರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೊದಲನೇ ಆರೋಪಿಯಾಗಿ, ಅವರ ಪತ್ನಿ ಪಾರ್ವತಿಯನ್ನು 2ನೇ ಆರೋಪಿಯಾಗಿ, ಪಾರ್ವತಿಯವರ ಸಹೋದರರಾಗಿರುವ ಮಲ್ಲಿಕಾರ್ಜುನ ಸ್ವಾಮಿ ಅವರನ್ನು 3ನೇ ಆರೋಪಿಯನ್ನಾಗಿ, ಜಮೀನು ಮಾಲೀಕ ದೇವರಾಜು ಅವರನ್ನು 4ನೇ ಆರೋಪಿಯನ್ನಾಗಿಸಲಾಗಿದೆ.