IPL Final || ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ – B. Dayanand

IPL Final || ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ತೊಂದರೆ ಕೊಟ್ರೆ ಕ್ರಮ – B. Dayanand

ಬೆಂಗಳೂರು: ಇಂದು RCB ಹಾಗೂ ಪಂಜಾಬ್ ನಡುವೆ ಫೈನಲ್ ಪಂದ್ಯ ನಡೆಯಲಿರುವ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಖಡಕ್ ಸೂಚನೆ ನೀಡಿದ್ದಾರೆ.

18 ವರ್ಷಗಳ ಕನಸನ್ನು ಹೊತ್ತುಕೊಂಡು ಫೈನಲ್‌ಗೆ ಲಗ್ಗೆಯಿಟ್ಟಿರುವ ಆರ್‌ಸಿಬಿ ಇಂದು ಪಂಜಾಬ್ ವಿರುದ್ಧ ಕೊನೆಯ ಪಂದ್ಯದಲ್ಲಿ ಸೆಣಸಾಡಲಿದೆ. ಹೀಗಾಗಿ ಬಹುಕಾಲದ ಆಸೆ ಈಡೇರಿಕೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಪಂದ್ಯದ ಬಳಿಕ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಕೆಲವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಈಗಾಗಲೇ ನಗರದ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಇನ್ನೂ ಸಾರ್ವಜನಿಕ ಸ್ಥಳಗಳಲ್ಲಿ ಎಲ್‌ಇಡಿ ಸ್ಕ್ರೀನ್ ಅಳವಡಿಸಿದ್ರೆ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ.

ಇನ್ನೂ ಪೊಲೀಸರಿಗೆ ಮಾಹಿತಿ ಇಲ್ಲದೇ ಎಲ್‌ಇಡಿ ಸ್ಕ್ರೀನ್ ಅಳವಡಿಸಿದ್ರೆ ಹಾಗೂ ಪಂದ್ಯದ ಬಳಿಕ ಸಂಭ್ರಮಾಚರಣೆ ಮಾಡಿ, ಇತರರಿಗೆ ತೊಂದರೆಕೊಟ್ಟರೆ ಅಂತವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಸೂಚನೆ ನೀಡಿದ್ದಾರೆ.

ಇಂದು ಸಂಜೆ 7:30ಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ

Leave a Reply

Your email address will not be published. Required fields are marked *