ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಕ್ರಮ ಟಿಕೆಟ್ ಮಾರಾಟ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಟಿಕೆಟ್ಗಳ ಬ್ಲಾಕ್ ಮಾರ್ಕೆಟ್ ಮಾರಾಟ ಪ್ರಕರಣ ಬೆಳಕಿಗೆ ಬಂದಿದೆ.ಕ್ಯಾಂಟೀನ್ ನೌಕರನಾಗಿದ್ದ ಚಂದ್ರಶೇಖರ್ ಎಂಬಾತನ ಬಳಿ ಸುಮಾರು 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್ಗಳು ಪತ್ತೆಯಾಗಿದ್ದು, ಅವುಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ಆರೋಪ ಕೇಳಿಬಂದಿದೆ.
ಒಂದೊಂದು ಟಿಕೆಟ್ ಅನ್ನು ಸುಮಾರು ₹15,000 ರಿಂದ ₹19,000 ವರೆಗೆ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಮಾರ್ಚ್ 28 ರಂದು ನಡೆದ ಆರ್ಸಿಬಿ ಹಾಗೂ ಕೆಕೆಆರ್ ಪಂದ್ಯ ಸೇರಿದಂತೆ, ಆರ್ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯಗಳ ಟಿಕೆಟ್ಗಳನ್ನೂ ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂಬ ಮಾಹಿತಿ ಹೊರಬಂದಿದೆ.
ಈ ಟಿಕೆಟ್ಗಳನ್ನು ಕೆಎಸ್ಸಿಎ ಸದಸ್ಯ ಗಣೇಶ್ ಪರೀಕ್ಷಿತ್ ನೀಡಿದ್ದರು ಎಂಬ ಆರೋಪವೂ ಕೇಳಿಬಂದಿದ್ದು, ಅವರು ಸದ್ಯ ತಲೆಮರೆಸಿಕೊಂಡಿದ್ದಾರೆ. ಅವರನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಟಿಕೆಟ್ ಮಾರಾಟಕ್ಕೆ ಸಹಕರಿಸಿದ ಆರೋಪದ ಮೇಲೆ ಕೆಲವು ಖಾಸಗಿ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧವೂ ಸಿಸಿಬಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಸಿಸಿಬಿ ಡಿಸಿಪಿ ಶ್ರೀಹರಿಬಾಬು ನೇತೃತ್ವದಲ್ಲಿ ಪ್ರಕರಣದ ಕುರಿತು ತೀವ್ರ ತನಿಖೆ ನಡೆಯುತ್ತಿದೆ.
For More Updates Join our WhatsApp Group :




