ಪರಮೇಶ್ವರ್ ಹೇಳಿಕೆ ಚರ್ಚೆಗೆ ಗ್ರಾಸ.
ತುಮಕೂರು : ರಸ್ತೆ, ಚರಂಡಿ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರಶ್ನಿಸಿದ್ದಾರೆ. ತುಮಕೂರಿನಲ್ಲಿ ಭಾನುವಾರ ನಡೆದ ಬಂಜಾರ ಸಮುದಾಯದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಸ್ತೆ ಮತ್ತು ಚರಂಡಿಗಳ ನಿರ್ಮಾಣದಿಂದ ಜನಸಮೂಹ ನಿಜವಾಗಿಯೂ ಉದ್ದಾರವಾಗುತ್ತದೆಯೇ? ಬಡವರ ಜೀವನ ಉದ್ದಾರವಾಗುತ್ತದೆಯೇ ಎಂದು ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರನ್ನು ಉದ್ದೇಶಿಸಿ ಪ್ರಶ್ನಿಸಿದ್ದಾರೆ.
ವರ್ಷಕ್ಕೆ 58 ಸಾವಿರ ಕೋಟಿ ರೂಪಾಯಿ ವೆಚ್ಚದ ಈ ಯೋಜನೆಗಳನ್ನು ನಿಲ್ಲಿಸಿದರೆ ಬಡವರ ಬದುಕು ಸುಧಾರಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. ರಸ್ತೆ, ಚರಂಡಿ ಅಥವಾ ಇನ್ನಿತರ ಕಾರ್ಯಕ್ರಮಗಳಿಂದ ಮಾತ್ರ ಬಡವರ ಜೀವನದಲ್ಲಿ ಬದಲಾವಣೆ ಬರುವುದಿಲ್ಲ. ಸಾವಿರಾರು ವರ್ಷಗಳ ಶೋಷಣೆಯನ್ನು ಕೊನೆಗಾಣಿಸುವುದು ಮತ್ತು ಜನರ ಜೀವನವನ್ನು ಸುಧಾರಿಸುವುದೇ ಗ್ಯಾರಂಟಿ ಯೋಜನೆಗಳ ಮುಖ್ಯ ಉದ್ದೇಶ. ನಾವು ರಸ್ತೆ, ಮನೆ ನಿರ್ಮಾಣ ಅಥವಾ ನೀರಾವರಿ ಯೋಜನೆಗಳನ್ನು ನಿಲ್ಲಿಸಿಲ್ಲ, ಅವು ನಿಧಾನವಾಗಿರಬಹುದು. ಆದರೆ ಅವು ಎಂದಿಗೂ ನಿಲ್ಲುವುದಿಲ್ಲ. ಜನರ ಜೀವನ ಉತ್ತಮಗೊಳ್ಳಬೇಕು ಮತ್ತು ಸುಧಾರಣೆಯಾಗಬೇಕು ಎಂಬ ದೃಷ್ಟಿಯಿಂದಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
For More Updates Join our WhatsApp Group :




