ಲಕ್ಕುಂಡಿಯಲ್ಲಿ ಎಲ್ಲೆಂದರಲ್ಲಿ ಬಂಗಾರ?

ಲಕ್ಕುಂಡಿಯಲ್ಲಿ ಎಲ್ಲೆಂದರಲ್ಲಿ ಬಂಗಾರ?

ನಿಧಿ ಕಥೆಗಳು ಮತ್ತೆ ಚರ್ಚೆಗೆ.

ಗದಗ: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯ ಅಗೆಯುವಾಗ ನಿಧಿ ಸಿಕ್ಕ ವಿಚಾರ ಈಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಈರಪ್ಪ ಕಣವಿ ಎಂಬವರು ಮಾತನಾಡಿದ್ದು, ಈ ಗ್ರಾಮದಲ್ಲಿ ಮಳೆಗಾಲದಲ್ಲಿ ಹಿಂದೆಲ್ಲ ಮಣ್ಣು ಅಗೆಯುವಾಗ ಚಿನ್ನದ ತುಂಡುಗಳು ಕಾಣಿಸುತ್ತಿದ್ದವು ಎಂದಿದ್ದಾರೆ. ಗ್ರಾಮದಲ್ಲಿ ಎಲ್ಲೇ ಅಗೆದರೂ ಬಂಗಾರ ಸಿಗುತ್ತಿತ್ತು. ಆದರೆ, ಈ ನಿಧಿ ಆಸೆಯ ಹಿಂದೆ ಹೋದವರು ರಕ್ತಕಾರಿ ಸತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಕಾರಣದಿಂದಾಗಿ, ನಿಧಿ ದೊರೆತರೂ ಅದನ್ನು ಸ್ವೀಕರಿಸುವುದು ಒಳ್ಳೆಯದಲ್ಲ ಎಂಬ ನಂಬಿಕೆ ಇದೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ, ಕೇಂದ್ರ ಸರ್ಕಾರದಿಂದಲೂ ಚಿನ್ನ ಶೋಧಿಸುವ ಪ್ರಯತ್ನ ನಡೆದಿತ್ತು, ಆದರೆ ಅದು ವಿಫಲವಾಗಿತ್ತು. ಇಂದಿಗೂ ಗ್ರಾಮದಲ್ಲಿ ಚಿನ್ನ ನಿಕ್ಷೇಪವಿದೆ ಎಂಬ ನಂಬಿಕೆ ಬಲವಾಗಿದೆ ಎಂದು ಮೂಲಗಳು ತಿಳಿಸಿವೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *