ದಳಪತಿ Vijay ಕೊನೆಯ ಸಿನಿಮಾಗೆ ಪಡೆದ ಸಂಭಾವನೆ ಇಷ್ಟೊಂದಾ..?

ದಳಪತಿ Vijay ಕೊನೆಯ ಸಿನಿಮಾಗೆ ಪಡೆದ ಸಂಭಾವನೆ ಇಷ್ಟೊಂದಾ..?

ದಳಪತಿ ವಿಜಯ್ ಅವರು ತಮ್ಮ ಮುಂಬರುವ ಚಿತ್ರ ‘ಜನ ನಾಯಗನ್’ಗೆ ಭರ್ಜರಿ ಸಂಭಾವನೆ ಪಡೆದಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಹರಡಿದೆ. ಇದು ಅವರನ್ನು ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರನ್ನಾಗಿ ಮಾಡಿದೆ. ಈ ಚಿತ್ರ ರಾಜಕೀಯದ ಹಿನ್ನೆಲೆಯನ್ನು ಹೊಂದಿದ್ದು, ವಿಜಯ್ ಅವರ ರಾಜಕೀಯ ಪ್ರವೇಶಕ್ಕೂ ಮುನ್ನ ಇದು ಅವರ ಕೊನೆಯ ಚಿತ್ರವಾಗಿದೆ ಎಂದು ಹೇಳಲಾಗುತ್ತಿದೆ.

ನಟ ದಳಪತಿ ವಿಜಯ್  ಅವರು ‘ಜನ ನಾಯಗನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ಈ ಚಿತ್ರಕ್ಕೆ ಪಡೆದ ಸಂಭಾವನೆ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ವಿಜಯ್ ಅವರು ಭಾರತದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯೋ ಹೀರೋ ಎನಿಸಿಕೊಂಡಿದ್ದಾರೆ. ಹಾಗಾದರೆ ವಿಜಯ್ ಅವರು ಈ ಚಿತ್ರಕ್ಕೆ ಎಷ್ಟು ಸಂಭಾವನೆ ಪಡೆದಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.

ದಕ್ಷಿಣ ಭಾರತದ ನಟ ವಿಜಯ್ ದಳಪತಿ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಾಗಿದ್ದಾರೆ. ಅವರು ತಮ್ಮ ಮುಂಬರುವ ಚಿತ್ರ ‘ಜನ ನಾಯಗನ್’ ಚಿತ್ರಕ್ಕಾಗಿ ಅವರು 275 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ. ದಕ್ಷಿಣದ ಸೂಪರ್ಸ್ಟಾರ್ ದಳಪತಿ ವಿಜಯ್ ಸತತವಾಗಿ ಬ್ಲಾಕ್ಬಸ್ಟರ್ ಹಿಟ್ಗಳನ್ನು ನೀಡಿದ್ದಾರೆ. ಈ ಚಿತ್ರವು ಅವರು ರಾಜಕೀಯಕ್ಕೆ ಪ್ರವೇಶಿಸುವುದಕ್ಕೂ ಮುನ್ನದ ಕೊನೆಯ ಚಿತ್ರವಾಗಿದೆ.

‘ಜನ ನಾಯಗನ್’ ಚಿತ್ರಕ್ಕಾಗಿ ಅವರ ಅಭಿಮಾನಿಗಳು ಹಲವು ದಿನಗಳಿಂದ ಕಾಯುತ್ತಿದ್ದಾರೆ. ಕನ್ನಡ ಮತ್ತು ತೆಲುಗು ಉದ್ಯಮಗಳಲ್ಲಿ ಅನೇಕ ಬ್ಲಾಕ್ಬಸ್ಟರ್ ಚಿತ್ರಗಳನ್ನು ನೀಡಿದ ‘ಕೆವಿಎನ್’ ಸಂಸ್ಥೆ ಈ ಚಿತ್ರವನ್ನು ನಿರ್ಮಿಸುತ್ತಿದೆ. ಇದಕ್ಕೂ ಮೊದಲು, ಶಾರುಖ್ ಖಾನ್ ತಮ್ಮ ಇತ್ತೀಚಿನ ಚಿತ್ರದಿಂದ 250 ಕೋಟಿ ರೂ.ಗಳ ಸಂಭಾವನೆ ಪಡೆದಿದ್ದರು. ರಜನಿಕಾಂತ್ ಪ್ರತಿ ಚಿತ್ರಕ್ಕೆ 200 ಕೋಟಿ ರೂಪಾಯಿ ಪಡೆಯುತ್ತಾರೆ ಎನ್ನಲಾಗಿದೆ. ಆದ್ದರಿಂದ, ಈಗ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ದಳಪತಿ ವಿಜಯ್ ಮುಂದಿದ್ದಾರೆ.

Leave a Reply

Your email address will not be published. Required fields are marked *