‘ಧುರಂಧರ್ 3’ ರಿಲೀಸ್ ಬಗ್ಗೆ ವೈರಲ್ ಪೋಸ್ಟ್: ಸತ್ಯವೇ?
‘ಧುರಂಧರ್ 2’ vs ‘ಟಾಕ್ಸಿಕ್’ ಎಂಬ ಪರಿಸ್ಥಿತಿ ನಿರ್ಮಾಣ ಆಗಿತ್ತು. ಆದರೆ, ಯಶ್ ನಟನೆಯ ‘ಟಾಕ್ಸಿಕ್’ ಚಿತ್ರ ತನ್ನ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿತ್ತು. ಈಗ ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಿ ಅಬ್ಬರಿಸುತ್ತಿದೆ. ವಿಶೇಷ ಎಂದರೆ, ಈ ಚಿತ್ರ ಕೇವಲ ನಾಲ್ಕು ದಿನಕ್ಕೆ 450 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರದ ಎದುರು ‘ಟಾಕ್ಸಿಕ್’ ತೆರೆಗೆ ಬಂದಿದ್ದರೆ ಏನಾಗುತ್ತಿತ್ತು ಎಂಬ ಪ್ರಶ್ನೆಯನ್ನು ಕೆಲವರು ಕೇಳುತ್ತಿದ್ದಾರೆ. ಈ ಮಧ್ಯೆ ‘ಟಾಕ್ಸಿಕ್’ ಸಿನಿಮಾ ಎದುರು ‘ಧುರಂಧರ್ 3’ ಬರಲಿದೆಯೇ ಎಂಬ ಪ್ರಶ್ನೆ ಮೂಡಿದೆ.
‘ಟಾಕ್ಸಿಕ್’ ಸಿನಿಮಾಗೆ ಯಶ್ ಹೀರೋ. ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ ಸೇರಿದಂತೆ ಅನೇಕರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಜೂನ್ 4ರಂದು ತೆರೆಗೆ ಬರಲಿದೆ. ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಿ ಅಬ್ಬರಿಸಲಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಯಾವ ರೀತಿಯಲ್ಲಿ ಇರಲಿದೆ ಎಂಬ ಕುತೂಹಲ ಮೂಡಿದೆ.
For More Updates Join our WhatsApp Group :




