ಕರ್ನಾಟಕದಾದ್ಯಂತ ಚಳಿ ಹೆಚ್ಚಾಗುತ್ತಿದೆ. ವಿಜಯಪುರದಲ್ಲಿ 1೦.೦ ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ 1೦ ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗುವ ನಿರೀಕ್ಷೆ ಇದೆ ಇದೆ. ಅಷ್ಟೇ ಅಲ್ಲದೆ ಉತ್ತ ಕನ್ನಡದಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 3.5 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವ ನಿರೀಕ್ಷೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದ ದಕ್ಷಿಣಮುಂದಿನ ದಿನಗಳ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ 1೦ ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡದಲ್ಲಿ ಮುಂದಿನ ಐದು ದಿನಗಳ ಕಾಲ ಸಾಮಾನ್ಯ ಉಷ್ಣಾಂಶಕ್ಕಿOತ 3.5 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ,ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಉತ್ತರ ಕನ್ನಡ,ಮ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ಕನಿಷ್ಠ ಉಷ್ಣಾಂಶ ಮತ್ತಷ್ಟು ಕಡಿಮೆಯಾಗಲಿದೆ.
ವಿಜಯಪುರದಲ್ಲಿ 1೦.೦ ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.೦ ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.೦ ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.೦ ಡಿಗ್ರಿ ಸಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್‌ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.೦ ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 1೦.೦ ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 29.೦ ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 1೦.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.೦ ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.೦ ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಕರ ಸಂಕ್ರಾOತಿ ಹಿಂದೂ ಧರ್ಮದ ಪ್ರಮುಖ ಹಬ್ಬವಾಗಿದೆ. ವೈದಿಕ ಪಂಚಾOಗದ ಪ್ರಕಾರ, ಸೂರ್ಯ ಧನು ರಾಶಿಯನ್ನು ತೊರೆದು ಮಕರ ರಾಶಿಯನ್ನು ಪ್ರವೇಶಿಸುವ ದಿನವನ್ನು ಮಕರ ಸಂಕ್ರಾOತಿ ಎಂದು ಆಚರಿಸಲಾಗುತ್ತದೆ. ದೇಶದಾದ್ಯಂತ ಈ ಹಬ್ಬವನ್ನು ವಿಭಿನ್ನ ಹೆಸರುಗಳು ಮತ್ತು ವಿಭಿನ್ನ ಸಂಪ್ರದಾಯಗಳಲ್ಲಿ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಹಿಂದೂ ನಂಬಿಕೆಗಳ ಪ್ರಕಾರ, ಈ ದಿನ ದಾನದ ಜೊತೆಗೆ ಪವಿತ್ರ ನದಿಗಳಲ್ಲಿ ಸ್ನಾನ ಮಾಡುವುದು ಮುಂಬರುವ ದಿನಗಳಲ್ಲಿ ಶುಭವನ್ನು ನೀಡುತ್ತದೆ ಎಂದು ನಂಬಲಾಗಿದೆ.
ಸೂರ್ಯ ಮಕರ ರಾಶಿಯನ್ನು ಪ್ರವೇಶಿಸಿದಾಗಿನಿಂದ ಉತ್ತರಾಯಣ ಕಾಲ ಪ್ರಾರಂಭವಾಗುತ್ತದೆ. ಈ ವರ್ಷ ಮಕರ ಸಂಕ್ರಾOತಿಯOದು ಸ್ನಾನ ಮಾಡಲು ಮತ್ತು ದಾನ ಮಾಡಲು ಉತ್ತಮ ಸಮಯ ಯಾವುದು ಎಂದು ಇಲ್ಲಿ ತಿಳಿದುಕೊಳ್ಳಿ. ವೈದಿಕ ಪಂಚಾOಗದ ಪ್ರಕಾರ, ಸೂರ್ಯ ಜನವರಿ 14 ಮಂಗಳವಾರ ಬೆಳಿಗ್ಗೆ 9.03 ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಅದಕ್ಕಾಗಿಯೇ ಈ ದಿನ ಮಕರ ಸಂಕ್ರಾOತಿಯನ್ನು ಆಚರಿಸಲಾಗುತ್ತದೆ.
ಸ್ನಾನ ಮತ್ತು ದಾನಕ್ಕೆ ಶುಭ ಸಮಯ ಯಾವಾಗ?
ಮಕರ ಸಂಕ್ರಾOತಿಯನ್ನು ಪೂಜೆ, ಸ್ನಾನ ಮತ್ತು ದಾನಕ್ಕೆ ಮಂಗಳಕರವೆOದು ಪರಿಗಣಿಸಲಾಗಿದೆ. ಈ ದಿನ ಶುಭ ಮುಹೂರ್ತದಲ್ಲಿ ಮಾತ್ರ ಪೂಜೆ, ಸ್ನಾನ, ದಾನ ಮಾಡಬೇಕು. ಜನವರಿ 14ರಂದು ಬೆಳಗ್ಗೆ 9.೦3ಕ್ಕೆ ಪುಣ್ಯಕಾಲ ಆರಂಭವಾಗಲಿದೆ. ಈ ಪುಣ್ಯಕಾಲವು ಸಂಜೆ ೫.೪೬ ರವರೆಗೆ ಇರುತ್ತದೆ, ಆದರೆ ಈ ದಿನ ಮಹಾ ಪುಣ್ಯಕಾಲವು 45 ನಿಮಿಷಗಳವರೆಗೆ ಇರುತ್ತದೆ. ಈ ಮಹಾಪುಣ್ಯಕಾಲವು ಬೆಳಗ್ಗೆ 1೦.೦3ಕ್ಕೆ ಪ್ರಾರಂಭವಾಗುತ್ತದೆ. ರಾತ್ರಿ 1೦.48ಕ್ಕೆ ಮುಕ್ತಾಯವಾಗುತ್ತದೆ. ಮಕರ ಸಂಕ್ರಾOತಿಯOದು ಸ್ನಾನ ಮಾಡಲು ಮತ್ತು ದಾನ ಮಾಡಲು ಇದು ಉತ್ತಮ ಸಮಯವಾದರೂ, ಮಹಾಪುಣ್ಯದ ಸಮಯದಲ್ಲಿ ಸ್ನಾನ ಮತ್ತು ದಾನವನ್ನು ಅತ್ಯಂತ ಮಂಗಳಕರವೆOದು ಪರಿಗಣಿಸಲಾಗಿದೆ.
ಮಕರ ಸಂಕ್ರಾOತಿಯ ಮಹತ್ವ:
ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಮಕರ ಸಂಕ್ರಾOತಿಯ ದಿನದಂದು, ಸೂರ್ಯನು ಉತ್ತರಾಯಣದ ಕಡೆಗೆ ಅಂದರೆ ಉತ್ತರದ ಕಡೆಗೆ ಚಲಿಸುತ್ತಾನೆ. ಹಾಗಾಗಿ ಈ ಹಬ್ಬವನ್ನು ಉತ್ತರಾಯಣಿ ಎಂದೂ ಕರೆಯುತ್ತಾರೆ. ಈ ದಿನ ಸೂರ್ಯನನ್ನು ಪೂಜಿಸುವ ಸಂಪ್ರದಾಯವಿದೆ. ಮಕರ ಸಂಕ್ರಾOತಿಯ ದಿನದಂದು ಸೂರ್ಯನೊಂದಿಗೆ ವಿಷ್ಣುವನ್ನು ಪೂಜಿಸಲಾಗುತ್ತದೆ. ಈ ದಿನ ಎಳ್ಳಿನ ಖಾದ್ಯಗಳು, ವಿವಿಧ ಭಕ್ಷ್ಯಗಳು ಮತ್ತು ಪರಮಾನ್ನಗಳಂತಹ ಸಾಂಪ್ರದಾಯಿಕ ಭಕ್ಷ್ಯಗಳನ್ನು ನೀಡಲಾಗುತ್ತದೆ. ಈ ದಿನ ಎಳ್ಳನ್ನು ದಾನ ಮಾಡುವುದು ಮಂಗಳಕರವೆOದು ಪರಿಗಣಿಸಲಾಗಿದೆ. ಈ ದಿನದಂದು ಧಾರ್ಮಿಕ ನಂಬಿಕೆಗಳ ಪ್ರಕಾರ, ಎಳ್ಳನ್ನು ದಾನ ಮಾಡುವುದರಿಂದ ಮತ್ತು ಸೂರ್ಯನಿಗೆ ನೈವೇದ್ಯವಾಗಿ ಪಾಯಸವನ್ನು ಅರ್ಪಿಸಿದರೆ, ಭಗವಾನ್ ವಿಷ್ಣು ಮತ್ತು ಸೂರ್ಯನ ಅನುಗ್ರಹವನ್ನು ಪಡೆಯಲಾಗುತ್ತದೆ ಎಂದು ನಂಬಲಾಗಿದೆ.