ನಮ್ಮ ತಂದೆ ಮಾಡಿದ ಅಭಿವೃದ್ಧಿ ಬಗ್ಗೆ ಹೇಳಬೇಕು ಅಂದ್ರೆ 3-4 ದಿನ ಬೇಕು

ನಮ್ಮ ತಂದೆ ಮಾಡಿದ ಅಭಿವೃದ್ಧಿ ಬಗ್ಗೆ ಹೇಳಬೇಕು ಅಂದ್ರೆ 3-4 ದಿನ ಬೇಕು

ಹಾವೇರಿ : ನಮ್ಮ ತಂದೆಯವರಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯದ ಪಟ್ಟಿ ಹೇಳುತ್ತ ಹೋದರೆ ಕನಿಷ್ಠ ಮೂರು ನಾಲ್ಕು ದಿನ ಬೇಕು. ಅಷ್ಟೊಂದು ಸಾಧನೆ ಮಾಡಿದ್ದಾರೆ. ಅವರ ಅಭಿವೃದ್ದಿ ಕಾರ್ಯ ಮುಂದುವರೆಸಲು ಆಶೀರ್ವದಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಸವಣೂರು ತಾಲೂಕಿನ ತೊಂಡೂರು, ಮೆಳ್ಳಾಗಟ್ಟಿ ಪ್ಲಾಟ್ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ್ದು, ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ನಮ್ಮ ತಂದೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ವಿಶೇಷವಾಗಿ ವರದಾ ಮೂಲಕ ಏತ ನೀರಾವರಿ ಮಾಡಿ ನೂರಕ್ಕು ಹೆಚ್ಚು ಕೆರೆಗಳು ತುಂಬಿವೆ. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಅನುಕೂಲವಾಗಿದೆ. ರಸ್ತೆಗಳ ನಿರ್ಮಾಣ, ಶಾಲಾ ಕಾಲೇಜು, ಶಿಗ್ಗಾವಿ ಸವಣೂರಿನಲ್ಲಿ ಇನ್ನೂರು ಬೆಡ್ ಆಸ್ಪತ್ರೆಗಳ ನಿರ್ಮಾಣ ಮಾಡಿದ್ದಾರೆ.  ಊರಿನ ರಸ್ತೆಗಳು, ರೈತರ ಹೊಲಗಳಿಗೆ ಹೋಗುವ ರಸ್ತೆಗಳು, ಐಟಿಐ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು, ಸಕ್ಕರೆ ಕಾರ್ಖಾನೆ, ಖುರ್ಷಾಪುರದಲ್ಲಿ ಗಾರ್ಮೆಂಟ್ ಫ್ಯಾಕ್ಟರಿ, ಜವಳಿ ಪಾರ್ಕ್ ಬಂದಿದೆ. ಈಗಾಗಲೇ ಕ್ಷೇತ್ರದ ಸುಮಾರು 5000 ಮಹಿಳೆಯರಿಗೆ ಉದ್ಯೋಗ ದೊರೆತಿದೆ. ಮುಂದಿನ ದಿನಗಳಲ್ಲಿ ಹತ್ತು ಸಾವಿರ ಮಹಿಳೆಯರಿಗೆ ಉದ್ಯೋಗ ದೊರೆಯಲಿ ಎಂದು ಹೇಳಿದರು.

ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಕನಕದಾಸರ  ಬಾಡ ಅಭಿವೃದ್ಧಿ, ಕನಕದಾಸರ ಕೋಟೆ, ಸಂತ ಶಿಶುನಾಳ ಶರೀಫರ ಊರು ಅಭಿವೃದ್ಧಿ ಮಾಡಲಾಗಿದೆ. ದೇಶದ ಎಕೈಕ ಜಾನಪದ ವಿಶ್ವ ವಿದ್ಯಾಲಯ ನಮ್ಮ ಶಿಗ್ಗಾವಿ ಕ್ಷೇತ್ರದಲ್ಲಿ ಇದು ಹೆಮ್ಮೆಯ ವಿಷಯ ಎಂದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮನೆ ನಿರ್ಮಾಣ ಮಾಡಲಾಗಿದ್ದು,15 ಸಾವಿರ ಮನೆಗಳ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ನವೆಂಬರ್ 13 ರಂದು ಎಲ್ಲರೂ ತಪ್ಪದೇ ನಿಮ್ಮ ಅಮೂಲ್ಯವಾದ ಮತವನ್ನು ನನಗೆ ನೀಡುವ ಮೂಲಕ  ನಿಮ್ಮ ಮನೆ ಮಗನಾಗಿ ನಿಮ್ಮ ಸೇವೆ ಮಾಡಲು ಅವಕಾಶ ಕಲ್ಪಿಸಬೇಕು. ತಂದೆಯವರ ಮಾರ್ಗದರ್ಶನ, ಪಕ್ಷದ ವರಿಷ್ಠರ ಮಾರ್ಗದರ್ಶನ, ಗರು ಹಿರಿಯರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುತ್ತೇನೆ ಎಂದು ಹೇಳಿದರು.

Leave a Reply

Your email address will not be published. Required fields are marked *